ಉತ್ತರ ಕನ್ನಡ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ, ಪಶ್ಚಿಮ ಬಂಗಾಳ ಮೂಲದ ಮೌಲಾನಾ ಬಂಧನ

ಉತ್ತರ ಕನ್ನಡ ಜಿಲ್ಲೆಯ ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮೌಲಾನಾ ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮೌಲಾನಾ ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಆರೋಪಿಯನ್ನು 25 ವರ್ಷದ ಮೌಲಾನಾ ಅಬ್ದುಲ್ ಸಮದ್ ಜಿಯಾಯಿ ಎಂದು ಗುರುತಿಸಲಾಗಿದೆ.

ಸಂತ್ರಸ್ತನ ತಂದೆ ನೀಡಿದ ದೂರಿನ ಮೇರೆಗೆ ಆತನನ್ನು ಬಂಧಿಸಲಾಗಿದೆ.

ಪೊಲೀಸರ ಪ್ರಕಾರ, ಬಾಲಕ ಕುರಾನ್ ಪಠಿಸಲು ಪ್ರತಿದಿನ ಮಸೀದಿಗೆ ಭೇಟಿ ನೀಡುತ್ತಿದ್ದನು. ಈ ವೇಳೆ ಆರೋಪಿ ಬಾಲಕನಿಗೆ ಆಮಿಷವೊಡ್ಡಿದ್ದಾನೆ ಮತ್ತು ಸೆಪ್ಟೆಂಬರ್ 23ರ ರಾತ್ರಿ ಆತನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.

ದೂರಿನ ಮೇರೆಗೆ ಕುಮಟಾ ಪೊಲೀಸರು ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಯನ್ನು ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸದ್ಯಕ್ಕೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com