ದಕ್ಷತೆಯಿಂದ ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆಯ ಹೆಸರು ತನ್ನಿ, ಇಲ್ಲವೇ ಜಾಗ ಖಾಲಿ ಮಾಡಿ: ಅಧಿಕಾರಿಗಳಿಗೆ ಡಿಸಿಎಂ ವಾರ್ನಿಂಗ್

ಒಂದೋ ದಕ್ಷತೆಯಿಂದ ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಡಿ, ಇಲ್ಲವೇ ಜಾಗ ತೆರವು ಮಾಡಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಎಲ್ಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಒಂದೋ ದಕ್ಷತೆಯಿಂದ ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಡಿ, ಇಲ್ಲವೇ ಜಾಗ ತೆರವು ಮಾಡಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಎಲ್ಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ಜಿಲ್ಲಾ ಪಂಚಾಯಿತಿ (ಜೆಡ್‌ಪಿ) ಕಚೇರಿಯಲ್ಲಿ ಸೋಮವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ಸಭೆಯಲ್ಲಿ ಮಾತನಾಡಿದ ಅವರು, ಸಭೆಗೆ ಗೈರು ಹಾಜರಾದ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಕಾಂತರಾಜ್‌ ಅವರಿಗೆ ಸೂಚಿಸಿದರು.

ಬನಶಂಕರಿಯಲ್ಲಿರುವ ಬೆಂಗಳೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ 2023-24ನೇ ಸಾಲಿನ ಮೊದಲ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಗ್ರಾಮ ಮತ್ತು ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸ್ಥಿತಿಗತಿ ಅರಿತು ಸಮಸ್ಯೆ ಪರಿಹರಿಸಲು ಆದ್ಯತೆ ನೀಡಬೇಕು. ಮಳೆ ಕೊರತೆಯಿಂದ ನೀರಿನ ಸಮಸ್ಯೆ ತಲೆದೋರಿದ್ದು, ನಿವಾರಣೆಗೆ ಕ್ರಮಕೈಗೊಳ್ಳಬೇಕು' ಎಂದು ಶಿವಕುಮಾರ್ ತಿಳಿಸಿದ್ದಾರೆ.

ನೀರಿನ ಕೊರತೆಯಿಂದ ಜನರು ಹೇಗೆ ನರಳುತ್ತಿದ್ದಾರೆ ಎಂಬ ಮಾಹಿತಿಯ ಕೊರತೆಗಾಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಶುದ್ಧ ನೀರು ಸರಬರಾಜು ಘಟಕಗಳಿಂದ ಪ್ರತಿದಿನ ಎಷ್ಟು ನೀರು ಸರಬರಾಜು ಮಾಡಲಾಗುತ್ತಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿಲ್ಲ. ಸಭೆಗೆ ತಯಾರಾಗದೆ ಬಂದಿದ್ದಕ್ಕೆ ಶಿವಕುಮಾರ್ ಕಿಡಿ ಕಾರಿದ್ದಾರೆ.

“ನೀವು ನಿಮ್ಮದೇ ಲೋಕದಲ್ಲಿದ್ದೀರಿ. ಪ್ರಮುಖ ಬೆಳವಣಿಗೆಗಳನ್ನು ಜಿಲ್ಲಾ ಸಚಿವರಿಗೆ ವರದಿ ಮಾಡುವ ಸೌಜನ್ಯ ಇಲ್ಲವೇ? ಈ ಬೆಳವಣಿಗೆಗಳ ಬಗ್ಗೆ ಏಕೆ ಮಾಹಿತಿ ನೀಡುತ್ತಿಲ್ಲ ಎಂದು ಶಿವಕುಮಾರ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸುಮಾರು 110 ಹಳ್ಳಿಗಳನ್ನು ಸೇರಿಸಲಾಗಿದೆ ಆದರೆ ಇನ್ನೂ ಅಭಿವೃದ್ಧಿ ಹೊಂದಿಲ್ಲ ಮತ್ತು ಅಸ್ಥಿರವಾಗಿದೆ, ಅವುಗಳನ್ನು ಒಂದು ದಶಕದ ಹಿಂದೆ ಪುರಸಭೆಯ ವ್ಯಾಪ್ತಿಗೆ ತರಲಾಯಿತು. ಈ ಅವ್ಯವಸ್ಥೆಗೆ ಜಿಲ್ಲಾ ಪಂಚಾಯತ್ ಹಾಗೂ ಇತರೆ ಸ್ಥಳೀಯಾಡಳಿತ ಅಧಿಕಾರಿಗಳು ಹೊಣೆಗಾರರಾಗಿದ್ದು, ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರ ಕೆಲಸವನ್ನು ಸಮಾನವಾಗಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಸ್ತೆ ಬದಿಯಲ್ಲಿ ಕಸ, ವೈದ್ಯಕೀಯ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ತಪ್ಪಿತಸ್ಥರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು. ಕಸ ವಿಲೇವಾರಿ ಕುರಿತು ಸಮಗ್ರ ವರದಿ ನೀಡುವಂತೆಯೂ ತಿಳಿಸಿದ್ದಾರೆ.

ಅಕ್ರಮವಾಗಿ ತ್ಯಾಜ್ಯ ಸಾಗಿಸುವ ವಾಹನಗಳ ಬಗ್ಗೆ ಜಿಲ್ಲಾಧಿಕಾರಿ, ಸಿಇಒ, ಪೊಲೀಸ್ ಅಧಿಕಾರಿಗಳು, ಆರ್‌ಟಿಒ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸಭೆ ನಡೆಸುವಂತೆ ಸೂಚಿಸಿದರು. ತಾಲ್ಲೂಕು ಪಂಚಾಯ್ತಿ ಮತ್ತು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಆದಾಯ ಗಳಿಕೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com