ತುಮಕೂರು: ಕಲುಷಿತ ನೀರು, ಆಹಾರ ಸೇವಿಸಿ 28 ಮಂದಿ ಅಸ್ವಸ್ಥ, ಆರು ಮಂದಿ ಜಿಲ್ಲಾಸ್ಪತ್ರೆಗೆ ದಾಖಲು

ತುಮಕೂರು ತಾಲೂಕಿನ ಗೋಳೂರು ಹೋಬಳಿಯ ಶೆಟ್ಟಪ್ಪನಹಳ್ಳಿಯಲ್ಲಿ ಕಲುಷಿತ ಆಹಾರ ಮತ್ತು ನೀರು ಸೇವಿಸಿದ 28 ಮಂದಿ ವಾಂತಿ ಭೇದಿಯಿಂದ ಬಳಲುತ್ತಿದ್ದು, 6 ಮಂದಿಯನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತರೆಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ತುಮಕೂರು: ತಾಲೂಕಿನ ಗೋಳೂರು ಹೋಬಳಿಯ ಶೆಟ್ಟಪ್ಪನಹಳ್ಳಿಯಲ್ಲಿ ಕಲುಷಿತ ಆಹಾರ ಮತ್ತು ನೀರು ಸೇವಿಸಿದ 28 ಮಂದಿ ವಾಂತಿ ಭೇದಿಯಿಂದ ಬಳಲುತ್ತಿದ್ದು, 6 ಮಂದಿಯನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತರೆಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ.

ಕಳೆದ ನಾಲ್ಕು ದಿನಗಳ ಹಿಂದೆ ಗ್ರಾಮದ ಕೆರೆ ಪ್ರದೇಶದಲ್ಲಿ ಬೆಳೆದಿದ್ದ ಅಣಬೆಯನ್ನು ಇವರೆಲ್ಲರೂ ಸೇವಿಸಿದ್ದರು. ಅಲ್ಲದೆ, ಗಣೇಶನ ಮೂರ್ತಿ ವಿಸರ್ಜನೆ ವೇಳೆ ನೀಡಿದ ಪ್ರಸಾದವನ್ನು ಅವರು ಸೇವಿಸಿದ್ದರು. ಸೋಮವಾರ ಬೆಳಗ್ಗೆ ಹಲವರಿಗೆ ವಾಂತಿ, ಭೇದಿ ಕಾಣಿಸಿಕೊಂಡಿತ್ತು. ಆದರೆ, ಈ ಹಿಂದಿನ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ.

250 ಜನಸಂಖ್ಯೆಯಿರುವ ಶೆಟ್ಟಪ್ಪನಹಳ್ಳಿಯಲ್ಲಿ ಬೋರ್‌ವೆಲ್‌ಗಳು ಕುಡಿಯುವ ನೀರಿನ ಮೂಲವಾಗಿವೆ. ಆದ್ದರಿಂದ, ಕಲುಷಿತ ನೀರಿನ ಸೇವನೆಯು ಜನರಲ್ಲಿ ವಾಂತಿ ಮತ್ತು ಭೇದಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಜಿಲ್ಲಾ ಆಸ್ಪತ್ರೆ ಸರ್ವೆಲೆನ್ಸ್ ಅಧಿಕಾರಿ ಡಾ. ರಾಮೇಗೌಡ ನೇತೃತ್ವದ ವೈದ್ಯರ ತಂಡ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿತು. ವಾಂತಿ, ಮಲ ಮತ್ತು ನೀರಿನ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರವೇ ನಿಖರ ಕಾರಣ ತಿಳಿಯಲಿದೆ. ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಗ್ರಾಮದಲ್ಲಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com