

ಬೆಂಗಳೂರು: ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ರೈತರು ಬೆಂಗಳೂರು-ಮೈಸೂರು ಹೆದ್ದಾರಿ ತಡೆದಿದ್ದು, ನೂರಾರು ರೈತರು ಟ್ರ್ಯಾಕ್ಟರ್ ಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಅಲ್ಲದೆ, ಕಾವೇರಿ ನದಿ ಬಳಿಯೂ ಜಮಾಯಿಸಿರುವ ರೈತರು ಬಾಯಿ ಬಡಿದುಕೊಂಡು, ನ್ಯಾಯ ಬೇಕೆಂದು ಆಗ್ರಹಿಸುತ್ತಿದ್ದಾರೆ.
ಈ ನಡುವೆ ನಗರದಲ್ಲೂ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸದರ ಫೋಟೋಗಳನ್ನು ಹಿಡಿದಿರುವ ಕಾರ್ಯಕರ್ತರು, ಸ್ವಾಭಿಮಾನ ಇದ್ದರೆ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.
ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರು ಮಾತನಾಡಿ, ಕನ್ನಡಿಗರು ನಿಮಗೆ ಓಟ್ ಹಾಕಿರುವುದು ರಾಜ್ಯದ ಹಿತಕಾಯುವ ಸಲುವಾದಿ. ನೆಲ-ಜಲ ಕಾಯುವ ಸಲುವಾಗಿ ಎಂದು ಹೇಳಿದ್ದಾರೆ.
ನಮ್ಮ ರಾಜ್ಯದ ಲಕ್ಷಾಂತರ ಕೋಟಿ ಹಣವನ್ನು ಉತ್ತರ ಭಾರತದವರಿಗೆ ಹಂಚಿಕೆ ಮಾಡಲಾಗುತ್ತದೆ. ಕರವೇ ಕಾರ್ಯಕರ್ತರು ಸಂಸದರ ಮನೆಗಳಿಗೆ ನುಗ್ಗುವ ಮುನ್ನ ಸ್ವಾಭಿಮಾನ ಇದ್ದರೆ ರಾಜೀನಾಮೆ ಕೊಡಬೇಕೆಂದು ತಿಳಿಸಿದರು.