ನೀರಿನ ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ: ರೈತರಿಗೆ ಸಚಿವ ಚಲುವರಾಯಸ್ವಾಮಿ

ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ನೀರು ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ರೈತರಿಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಒತ್ತಾಯಿಸಿದ್ದಾರೆ.
ಸಚಿವ ಚಲುವರಾಯಸ್ವಾಮಿ
ಸಚಿವ ಚಲುವರಾಯಸ್ವಾಮಿ
Updated on

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ನೀರು ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ರೈತರಿಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಒತ್ತಾಯಿಸಿದ್ದಾರೆ.

ಬುಧವಾರ ರೈತ ಸಂಘಟನೆಗಳು, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಇತರೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚಲುವರಾಯಸ್ವಾಮಿ ಅವರು ಸಭೆ ನಡೆಸಿದರು. ಈ ವೇಳೆ ಅತ್ಯಾಧುನಿಕ ತಂತ್ರಜ್ಞಾನವನ್ನು ರೈತರು ಬಳಸಿಕೊಳ್ಳಬೇಕು ಎಂದು ಹೇಳಿದರು.

ಹೆಚ್ಚು ತಂತ್ರಜ್ಞಾನವನ್ನು ಬಳಸಿ, ಕಡಿಮೆ ನೀರನ್ನು ಬಳಸಿಗೂ ಬೆಳೆಗಳನ್ನು ಬೆಳೆಯಲು ಬಳಸಬಹುದು, ಹನಿ ನೀರಾವರಿ ಮತ್ತು ಕೃಷಿಗೆ ಕಡಿಮೆ ನೀರನ್ನು ಬಳಸಬೇಕು ಎಂದು ತಿಳಿಸಿದರು.

ರೈತರಿಗೆ ಸಹಾಯ ಮಾಡಲು ನ್ಯಾನೋ ಯೂರಿಯಾ ಪ್ರಯೋಗಗಳನ್ನು ನಡೆಸಲಾಗುತ್ತಿದೆ. ಇದು ರೈತರಿಗೂ ಲಭ್ಯವಾಗಲಿದೆ. ಕೃಷಿಯಲ್ಲಿ ಡ್ರೋಣ್ ತಂತ್ರಜ್ಞಾನವನ್ನು ಬಳಸಲು ರಾಜ್ಯ ಸರ್ಕಾರ ರೈತರಿಗೆ ಸಹಾಯ ಮಾಡುತ್ತಿದೆ ಎಂದರು.

ಇದೇ ವೇಳೆ ಅನ್ನ ಭಾಗ್ಯದಲ್ಲಿ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ರಾಗಿ, ಶೇಂಗಾ ಮತ್ತಿತರ ಪೌಷ್ಟಿಕಾಂಶದ ಪದಾರ್ಥಗಳನ್ನು ನೀಡುವಂತೆ ರೈತ ಸಂಘಟನೆಗಳು ಸಚಿವರಿಗೆ ಮನವಿ ಮಾಡಿಕೊಂಡರು.

ರೈತರ ಉತ್ಪನ್ನಗಳನ್ನು ಬಲಪಡಿಸಿ, ರೈತರಿಗೆ ಶಾಶ್ವತ ಸಿರಿಧಾನ್ಯ ಮಾರುಕಟ್ಟೆಯನ್ನು ಸ್ಥಾಪಿಸಬೇಕು ಎಂದೂ ಸಚಿವರನ್ನು ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com