ಮುನ್ನೆಚ್ಚರಿಕಾ ಕ್ರಮವಾಗಿ ನೂರಾರು ಪ್ರತಿಭಟನಾನಿರತರ ಬಂಧನ; ನಗರದಲ್ಲಿ ಯಾವುದೇ ಅವಘಡ ಆಗಿಲ್ಲ: ಬೆಂಗಳೂರು ಪೊಲೀಸ್

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಯಶಸ್ವಿಯಾಗಿದ್ದು, ಬಂದ್ ವೇಳೆಯಲ್ಲಿ ನೂರಾರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆಯಲಾಗಿತ್ತು. 
ಕಾವೇರಿ ಪ್ರತಿಭಟನೆ
ಕಾವೇರಿ ಪ್ರತಿಭಟನೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಯಶಸ್ವಿಯಾಗಿದ್ದು, ಬಂದ್ ವೇಳೆಯಲ್ಲಿ ನೂರಾರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆಯಲಾಗಿತ್ತು. 

ರಸ್ತೆ ತಡೆಗೆ ಯತ್ನಿಸಿದ 700 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದರು.

ಬಂದ್ ಮುಕ್ತಾಯಗೊಂಡ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್, ಬಂದ್ ನಗರದಲ್ಲಿ ಶಾಂತಿಯುತವಾಗಿ ಮುಕ್ತಾಯವಾಯಿತು. ಎಲ್ಲಿಯೂ ಕಲ್ಲು ತೂರಾಟ, ಒತ್ತಾಯಪೂರ್ವಕವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವ ಕೆಲಸಗಳಾಗಲೀ, ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನಾಗಲೀ ನಿಲ್ಲಿಸುವ ಕೆಲಸಗಳಾಗಿಲ್ಲ.

ಮುನ್ನೆಚ್ಚರಿಕಾ ಕ್ರಮವಾಗಿ 785 ಪ್ರತಿಭಟನಾ ನಿರತರನ್ನು ಬಂಧಿಸಿ ನಂತರ ಅವರನ್ನು ಬಿಡುಗಡೆ ಮಾಡಲಾಯಿತು ಎಂದು ಆಯುಕ್ತರು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com