'ಕಾವೇರಿ' ಗಲಾಟೆಗೆ ಕರ್ನಾಟಕ ಬಂದ್‌: ಬೆಂಗಳೂರು, ರಾಜ್ಯದ ದಕ್ಷಿಣ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ‘ಕನ್ನಡ ಒಕ್ಕೂಟ’ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಇಂದು ಶುಕ್ರವಾರ ಬೆಂಗಳೂರು ಹಾಗೂ ರಾಜ್ಯದ ಇತರ ದಕ್ಷಿಣ ಭಾಗಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಇಂದು ಕರ್ನಾಟಕ ಬಂದ್‌ನಲ್ಲಿ ಪಾಲ್ಗೊಳ್ಳುವಂತೆ ಕನ್ನಡ ಕಾರ್ಯಕರ್ತರು ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ
ತಮಿಳುನಾಡಿಗೆ ಕಾವೇರಿ ನೀರು ಬಿಡುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಇಂದು ಕರ್ನಾಟಕ ಬಂದ್‌ನಲ್ಲಿ ಪಾಲ್ಗೊಳ್ಳುವಂತೆ ಕನ್ನಡ ಕಾರ್ಯಕರ್ತರು ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ‘ಕನ್ನಡ ಒಕ್ಕೂಟ’ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಇಂದು ಶುಕ್ರವಾರ ಬೆಂಗಳೂರು ಹಾಗೂ ರಾಜ್ಯದ ಇತರ ದಕ್ಷಿಣ ಭಾಗಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಬೆಂಗಳೂರು ನಗರ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಕ್ರಿಮಿನಲ್ ಪ್ರಕ್ರಿಯೆಯ ಭಾಗವಾಗಿ ಸಂಹಿತೆಯ ಸೆಕ್ಷನ್ 144 ರ ಅಡಿಯಲ್ಲಿ ಅಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದು ಈ ಭಾಗಗಳ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

'ಕನ್ನಡ ಒಕ್ಕೂಟ' ಕನ್ನಡ ಮತ್ತು ರೈತರ ಸಂಘಟನೆಗಳ ಅಡಿಯಲ್ಲಿ ಬರುವ ಸಂಸ್ಥೆ, ಇದೇ ಕಾರಣಕ್ಕೆ ಮಂಗಳವಾರ ಬೆಂಗಳೂರು ಬಂದ್‌ ಆಚರಿಸಲಾಯಿತು. ರಾಜ್ಯದ ದಕ್ಷಿಣ ಭಾಗದ ಮಂಡ್ಯದಂತಹ ಕಾವೇರಿ ಜಲಾನಯನ ಜಿಲ್ಲೆಗಳಲ್ಲಿ ಹೆಚ್ಚಿನ ಅಂಗಡಿಗಳು, ವ್ಯಾಪಾರ ಸಂಸ್ಥೆಗಳು ಮತ್ತು ತಿಂಡಿ-ತಿನಿಸು ಕೇಂದ್ರಗಳು ಬಂದ್ ಆಗಿವೆ. 

ಆ ಪ್ರದೇಶಗಳಲ್ಲಿ ಖಾಸಗಿ ವಾಹನಗಳು ರಸ್ತೆಗಿಳಿದಿದ್ದವು. ಸರ್ಕಾರಿ ಸ್ವಾಮ್ಯದ ಸಾರಿಗೆ ನಿಗಮಗಳು ಬಂದ್ ಗೆ ಹೆದರಿ ದಕ್ಷಿಣ ಜಿಲ್ಲೆಗಳಲ್ಲಿ ಕೆಲವೇ ಬಸ್ ಗಳು ಸಂಚರಿಸುತ್ತಿವೆ. ಬಂದ್‌ಗೆ ರಾಜ್ಯದ ಇತರ ಪ್ರದೇಶಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜಿಲ್ಲಾ ಕೇಂದ್ರವಾದ ಚಿತ್ರದುರ್ಗದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಭಾವಚಿತ್ರಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದರು. ಕನ್ನಡ ಚಿತ್ರರಂಗ ಬಂದ್‌ಗೆ ಬೆಂಬಲ ನೀಡಿದೆ. ರಾಜ್ಯಾದ್ಯಂತ ಚಿತ್ರಮಂದಿರಗಳು ಸಂಜೆಯವರೆಗೂ ಪ್ರದರ್ಶನಗಳನ್ನು ರದ್ದುಗೊಳಿಸಿದ್ದು, ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘ ಬಂದ್‌ಗೆ ಬೆಂಬಲ ನೀಡಿದೆ.

ಬೆಂಗಳೂರಿನ ಬಹುತೇಕ ಐಟಿ ಕಂಪನಿಗಳು ಮತ್ತು ಇತರ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚಿಸಿವೆ. ಬೆಂಗಳೂರಿನ ಪ್ರಮುಖ ಮಾರುಕಟ್ಟೆ ಪ್ರದೇಶಗಳಾದ ಚಿಕ್ಕಪೇಟೆ, ಬಳೆಪೇಟೆ ಮತ್ತು ಅಕ್ಕಪಕ್ಕದ ವ್ಯಾಪಾರ ಪ್ರದೇಶಗಳು ನಿರ್ಜನವಾಗಿ ಕಾಣುತ್ತಿದ್ದವು.

ಆಟೋ ರಿಕ್ಷಾ ಚಾಲಕರ ಒಕ್ಕೂಟ, ಓಲಾ ಉಬರ್ ಚಾಲಕರು ಮತ್ತು ಮಾಲೀಕರ ಸಂಘಗಳು ಕೂಡ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ.

ಕರವೇ ಸಂಘಟನೆಯ ಮುಖ್ಯಸ್ಥ ಪ್ರವೀಣ್ ಶೆಟ್ಟಿ ಪೊಲೀಸರ ವಶಕ್ಕೆ: ಬೆಂಗಳೂರು ನಗರದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ. ಆದರೆ ಕೆಲವು ಪ್ರತಿಭಟನಾಕಾರರು ಟೌನ್ ಹಾಲ್ ಮುಂದೆ ಬಂದು ಪ್ರತಿಭಟನೆಗೆ ಮುಂದಾಗುತ್ತಿದ್ದಾರೆ. ಆದರೆ ಅವರನ್ನೆಲ್ಲಾ ವಶಕ್ಕೆ ಪಡೆದುಕೊಳ್ಳಲಾಗುತ್ತಿದೆ. ಮತ್ತೊಂಡೆದೆ, ಪ್ರವೀಣ್ ಶೆಟ್ಟಿವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಡ್ಯದಲ್ಲಿ ಹೆಚ್ಚಾದ ಪ್ರತಿಭಟನೆ: ಮಂಡ್ಯದಲ್ಲಿ ಹೆಚ್ಚಾಯ್ತು ಅನ್ನದಾತರ ಆಕ್ರೋಶ. ಏಕಾಂಗಿ ಹೋರಾಟಕ್ಕೆ ಮುಂದಾದದ ರೈತ. ಬೂದನಹೊಸೂರು ಗ್ರಾಮದ ಶಿವರಾಮು ಎಂಬುವರಿಂದ ಏಕಾಂಗಿ ಪ್ರತಿಭಟನೆ ಮಾಡುತ್ತಿದ್ದು, ಮಂಡ್ಯದ ಸಂಜಯ ವೃತ್ತದಲ್ಲಿ ಪ್ರತಿಭಟನೆ. ಸರ್ಕಾರ, ಡಿಕೆಶಿ, ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು. 

ಬಿಕೋ ಎನ್ನುತ್ತಿರುವ ಬೆಂಗಳೂರು ಬಸ್ ನಿಲ್ದಾಣಗಳು ಬೆಂಗಳೂರಿನಲ್ಲಿ ಬಿಕೋ ಎನ್ನುತ್ತಿರುವ ಬಸ್ ನಿಲ್ದಾಣಗಳು. ಮೆಜೆಸ್ಟಿಕ್ ನಲ್ಲಿ ಜನರೇ ಇಲ್ಲ. ಖಾಲಿ ಬಸ್ಸುಗಳ ಸಂಚಾರ. ಸ್ಯಾಟಲೈಟ್ ಬಸ್ ಸ್ಟ್ಯಾಂಡ್ ನಲ್ಲಿ ಬಸ್ಸುಗಳಿದ್ದರೂ ಜನರೇ ಇಲ್ಲ. ಅಲ್ಲಿ ಸಾಮಾನ್ಯವಾಗಿ ಕಾಣುತ್ತಿದ್ದ ತಮಿಳುನಾಡಿನ ಬಸ್ಸುಗಳು ಇಂದು ಅತ್ತ ಸುಳಿದಿಲ್ಲ.

ಬೆಂಗಳೂರು - ಪ್ರತಿಭಟನಾಕಾರರು ಫ್ರೀಡಂ ಪಾರ್ಕ್ ಗೆ ರವಾನೆ: ಬೆಂಗಳೂರಿನಲ್ಲಿ ಪ್ರತಿಭಟನೆಯ ಕಾವು ಜೋರಾಗುತ್ತಿದ್ದಂತೆ ಪೊಲೀಸರು ಎಲ್ಲೆಡೆ ಹೈ ಅಲರ್ಟ್ ಆಗಿದ್ದಾರೆ. ಪ್ರತಿಭಟನೆಗಳು ನಡೆಯುವ ಜಾಗಗಳಾದ ಟೌನ್ ಹಾಲ್ ಸೇರಿದಂತೆ ಕೆಲವಾರು ಸ್ಥಳಗಳನ್ನು ಮೊದಲೇ ಗುರುತಿಸಿದ್ದ ಪೊಲೀಸರು ಅಲ್ಲಿಗೆ ಆಗಮಿಸಿದ ಪ್ರತಿಭಟನಾಕಾರರನ್ನು ಬಸ್ ಗಳಲ್ಲಿ ತುಂಬಿ ಫ್ರೀಡಂ ಪಾರ್ಕ್ ನತ್ತ ಕೊಂಡೊಯ್ದಿದ್ದಾರೆ.

ಕೋಲಾರ, ಕೆಜಿಎಫ್ ಸಂಪೂರ್ಣ ಸ್ತಬ್ಧ: ಕೋಲಾರದ ಕೆಜಿಎಫ್ ನಲ್ಲಿ ಮುಂಜಾನೆಯಿಂದಲೇ ಸಂಪೂರ್ಣ ಬಂದ್. ಬಸ್ಸುಗಳು, ಆಟೋಗಳು ಅಥವಾ ಯಾವುದೇ ಖಾಸಗಿ ವಾಣಿಜ್ಯ ವಾಹನಗಳ ಚಟುವಟಿಕೆ ಸಂಪೂರ್ಣ ಸ್ತಬ್ಧ. ಮುಂಜಾನೆಯಿಂದಲೇ ಕನ್ನಡ ಪರ ಸಂಘಟನೆಗಳಿಂದ ಹಲವಾರು ಕಡೆಗಳಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ. ಇತ್ತ, ಜಿಲ್ಲಾ ಕೇಂದ್ರವಾದ ಕೋಲಾರದಲ್ಲಿ ಕನ್ನಡ ಪರ ಸಂಘಟನೆಗಳು ಮುಂಜಾನೆಯಿಂದಲೇ ಪ್ರತಿಭಟನೆಗಿಳಿದಿದ್ದಾರೆ. ಡೂಂಲೈಟ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com