ಜನತಾ ದರ್ಶನ ವೇದಿಕೆಯಲ್ಲಿ ಕಿತ್ತಾಟ
ಜನತಾ ದರ್ಶನ ವೇದಿಕೆಯಲ್ಲಿ ಕಿತ್ತಾಟ

ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಕಿತ್ತಾಟ: ಸಂಸದ ಮುನಿಸ್ವಾಮಿ, ಶಾಸಕ ಎಸ್‌ಎನ್ ನಾರಾಯಣಸ್ವಾಮಿ ವಿರುದ್ಧ ಎಫ್‌ಐಆರ್

ಕೋಲಾರದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ ಹಾಗೂ ಶಾಸಕ ಎಸ್‌ಎನ್ ನಾರಾಯಣಸ್ವಾಮಿ  ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧವೂ ಎಫ್‌ಐಆರ್  ದಾಖಲಿಸಲಾಗಿದೆ.

ಬೆಂಗಳೂರು: ಕೋಲಾರದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ ಹಾಗೂ ಶಾಸಕ ಎಸ್‌ಎನ್ ನಾರಾಯಣಸ್ವಾಮಿ  ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧವೂ ಎಫ್‌ಐಆರ್  ದಾಖಲಿಸಲಾಗಿದೆ.

ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ ಹಾಗೂ ಶಾಸಕ ಎಸ್ಎನ್ ನಾರಾಯಣಸ್ವಾಮಿ ನಡುವೆ ಜಟಾಪಟಿ ನಡೆದಿತ್ತು ಬಂಗಾರಪೇಟೆ ಶಾಸಕರ ದೂರಿನ ಅನ್ವಯ ಸಂಸದರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಶಾಸಕ ಎಸ್‌ಎನ್ ನಾರಾಯಣಸ್ವಾಮಿ ವಿರುದ್ಧ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಬಾಲಾಜಿ ದೂರು ನೀಡಿದ್ದು, ಬಂಗಾರಪೇಟೆ ಶಾಸಕರ ದೂರಿನ ಅನ್ವಯ ಸಂಸದರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಸೆ.25ರಂದು ನಗರದ ಚನ್ನಯ್ಯ ರಂಗಮಂದಿರದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮುನಿಸ್ವಾಮಿ ಹಾಗೂ ನಾರಾಯಣಸ್ವಾಮಿ ಅವರು ಪರಸ್ಪರ ಗಲಾಟೆ ಮಾಡಿಕೊಂಡಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.

ಈ ವೇಳೆ ಎಸ್ಪಿ ನಾರಾಯಣ ಅವರು ಇಬ್ಬರ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಅಲ್ಲದೇ ಜಿಲ್ಲಾ ಮಂತ್ರಿ ಭೈರತಿ ಸುರೇಶ್ ಮಧ್ಯ ಪ್ರವೇಶಿಸಿ ಸಂಸದರಿಂದ ಅಗಬಹುದಾದಂತಹ ಮಾರಣಾಂತಿಕ ಹಲ್ಲೆಯನ್ನು ತಪ್ಪಿಸಿದ್ದಾರೆ.

ಜನತಾ ದರ್ಶನದಲ್ಲಿ ಮುನಿಸ್ವಾಮಿ ನನ್ನತ್ತ ಕೈ ತೋರಿಸಿ ಸಚಿವರನ್ನು ನೋಡುತ್ತಾ, ‘ಅಕ್ಕಪಕ್ಕದಲ್ಲಿ ಭೂಗಳ್ಳರನ್ನು ಕೂರಿಸಿಕೊಂಡು ನೀನೇನು ಮಾಡಲು ಸಾಧ್ಯ’ ಎಂದು ವ್ಯಂಗ್ಯವಾಗಿ ಮತ್ತು ದರ್ಪದಿಂದ ಅವಮಾನ ಮಾಡುವ ರೀತಿ ಮಾತನಾಡಿದ್ದಾರೆ’ ಎಂದು ದೂರಿನಲ್ಲಿ ನಾರಾಯಣಸ್ವಾಮಿ ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com