ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಏಪ್ರಿಲ್ 11 ರವರೆಗೆ ನ್ಯಾಯಾಂಗ ಬಂಧನ

ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್ 11 ರವರೆಗೆ ನ್ಯಾಯಾಂಗ ಬಂಧನ ನೀಡಿ ಶನಿವಾರ ಆದೇಶಿಸಿದೆ.
ಮಾಡಾಳ್ ವಿರೂಪಾಕ್ಷಪ್ಪ
ಮಾಡಾಳ್ ವಿರೂಪಾಕ್ಷಪ್ಪ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್ 11 ರವರೆಗೆ ನ್ಯಾಯಾಂಗ ಬಂಧನ ನೀಡಿ ಶನಿವಾರ ಆದೇಶಿಸಿದೆ.

ಐದು ದಿನಗಳ ಲೋಕಾಯುಕ್ತ ಪೊಲೀಸ್ ಕಸ್ಟಡಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿ ಶಾಸಕರನ್ನು ಲೋಕಾಯುಕ್ತ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯ, ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಏಪ್ರಿಲ್ 11ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇದೇ ವೇಳೆ ಮಾಡಾಳ್ ವಿರೂಪಾಕ್ಷಪ್ಪ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದರು. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಲೋಕಾಯುಕ್ತ ಅಧಿಕಾರಿಗಳಿಗೆ ಸೂಚನೆ ನೀಡಿ​​, ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಮುಂದೂಡಿದೆ.

ಕೋರ್ಟ್​​ ನ್ಯಾಯಾಂಗ ಬಂಧನ ವಿಧಿಸಿದ ಕಾರಣ ಪೊಲೀಸರು ಶಾಸಕ ಮಾಡಾಳು ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com