ವೀಕೆಂಡ್ ಟ್ರಿಪ್ ಗೆ ಹೋಗಿದ್ದ ಬೆಂಗಳೂರಿನ ಇಬ್ಬರು ಯುವತಿ, ಓರ್ವ ಯುವಕ ನೀರುಪಾಲು

ವೀಕೆಂಡ್ ಟ್ರಿಪ್ ಗೆ ತೆರಳಿದ್ದ ಬೆಂಗಳೂರಿನ ಇಬ್ಬರು ಯುವತಿಯವರು ಹಾಗೂ ಓರ್ವ ಯುವಕ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ನಡೆದಿದೆ.
ಮೃತ ವಿದ್ಯಾರ್ಥಿಗಳು
ಮೃತ ವಿದ್ಯಾರ್ಥಿಗಳು

ಚಿಕ್ಕಬಳ್ಳಾಪುರ: ವೀಕೆಂಡ್ ಟ್ರಿಪ್ ಗೆ ತೆರಳಿದ್ದ ಬೆಂಗಳೂರಿನ ಇಬ್ಬರು ಯುವತಿಯವರು ಹಾಗೂ ಓರ್ವ ಯುವಕ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ನಡೆದಿದೆ.

ಒಟ್ಟು 6 ವಿದ್ಯಾರ್ಥಿಗಳು ಇಂದು ಬೆಂಗಳೂರಿನಿಂದ ಶ್ರೀನಿವಾಸ ಸಾಗರ ಡ್ಯಾಂ ಟ್ರಿಪ್ ಗೆ ಹೋಗಿದ್ದು, ಈ ವೇಳೆ ಈಜಲು ನೀರಿಗೆ ಇಳಿದಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ. ಮೃತರನ್ನು ಪೂಜಾ, ರಾಧಿಕಾ ಹಾಗೂ ಇಮ್ರಾನ್ ಎಂದು ಗುರುತಿಸಲಾಗಿದೆ. 

ಬೆಂಗಳೂರಿನಲ್ಲಿ ಡಿ ಫಾರ್ಮಸಿ ಓದುತ್ತಿದ್ದ ಈ ವಿದ್ಯಾರ್ಥಿಗಳು ಬೈಕ್‌ನಲ್ಲಿ ಶ್ರೀನಿವಾಸ ಸಾಗರ ಡ್ಯಾಂ ತೆರಳಿದ್ದು, ಮಧ್ಯಾಹ್ನದ ವೇಳೆ ಡ್ಯಾಮ್‌ನಲ್ಲಿ ಈಜಲು ಮುಂದಾಗಿದ್ದಾರೆ. ಈ ವೇಳೆ ಡ್ಯಾಮ್‌ನ ಒಳಗಿದ್ದ ಕಲ್ಲಿನ ಮೇಲೆ ನಿಂತುಕೊಂಡು ಒಬ್ಬರನ್ನೊಬ್ಬರು ಕೈ ಹಿಡಿದುಕೊಂಡು ಆಳವಿರುವ ಪ್ರದೇಶಕ್ಕೆ ಹೋಗಿದ್ದಾರೆ. ಆದರೆ, ಈ ವೇಳೆ ಒಬ್ಬರು ಕಾಲುಜಾರಿ ಬಿದ್ದಿದ್ದಾರೆ. ಅವರನ್ನು ರಕ್ಷಣೆ ಮಾಡಲು ಎಲ್ಲರೂ ಕೈ- ಕೈ ಹಿಡಿದುಕೊಂಡೇ ಸರಪಳಿ ರೀತಿಯಲ್ಲಿ ಮುಂದಾಗಿದ್ದಾರೆ. ಈ ವೇಳೆ ಮೊದಲು ಕಾಲು ಜಾರಿ ಬಿದ್ದ ವಿದ್ಯಾರ್ಥಿನಿಯ ಜೊತೆಗೆ ಮತ್ತಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. 

ಉಳಿದಂತೆ ಇನ್ನು ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com