ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಮೀಸಲಾತಿ ನೀತಿ ರದ್ದುಪಡಿಸುತ್ತೇವೆ: ಕಾಂಗ್ರೆಸ್ ವಿರುದ್ಧ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವಾಗ್ದಾಳಿ

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಬಿಜೆಪಿ ಸರ್ಕಾರದ ಮೀಸಲಾತಿ ನೀತಿಯನ್ನು ಹಿಂಪಡೆಯುತ್ತೇವೆ ಎಂದು ಹೇಳುತ್ತಿರುವ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಶನಿವಾರ ವಾಗ್ದಾಳಿ ನಡೆಸಿದರು.
ಕೋಟಾ ಶ್ರೀನಿವಾಸ ಪೂಜಾರಿ
ಕೋಟಾ ಶ್ರೀನಿವಾಸ ಪೂಜಾರಿ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಬಿಜೆಪಿ ಸರ್ಕಾರದ ಮೀಸಲಾತಿ ನೀತಿಯನ್ನು ಹಿಂಪಡೆಯುತ್ತೇವೆ ಎಂದು ಹೇಳುತ್ತಿರುವ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಶನಿವಾರ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ.4ರಷ್ಟು 2ಬಿ ಮೀಸಲಾತಿಯನ್ನು ರದ್ದುಗೊಳಿಸುವ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ. ಲಿಂಗಾಯತ ಮತ್ತು ಒಕ್ಕಲಿಗರಿಗೆ ಮೀಸಲಾತಿ ಕೋಟಾ ಹೆಚ್ಚಳವನ್ನು ಅವರು ರದ್ದುಗೊಳಿಸುತ್ತಾರೆಯೇ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರವು ಮುಸ್ಲಿಮರಿಗೆ ಶೇ.4 ಕೋಟಾವನ್ನು ರದ್ದುಗೊಳಿಸಿತು. ಈ ಮೂಲಕ ಅವರನ್ನು ಆರ್ಥಿಕವಾಗಿ ದುರ್ಬಲ ವಿಭಾಗ (EWS) ಕೋಟಾಕ್ಕೆ ವರ್ಗಾಯಿಸಿದೆ. ಇದರ ಮೀಸಲಾತಿಯನ್ನು ಲಿಂಗಾಯತರು ಮತ್ತು ವೊಕ್ಕಲಿಗರಿಗೆ ಮರುಹಂಚಿಕೆ ಮಾಡಿದೆ. ಬಿಜೆಪಿ ಸರಕಾರ ಎಲ್ಲರಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡುತ್ತಿದ್ದು, ಕಾಂಗ್ರೆಸ್ ಮುಖಂಡರು ಬೇಜವಾಬ್ದಾರಿ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆಂದು ಕಿಡಿಕಾರಿದರು.

ಬಿಜೆಪಿ ರಾಷ್ಟ್ರೀಯ ವಕ್ತಾರ ಮತ್ತು ರಾಜ್ಯಸಭಾ ಸಂಸದ ಜಿವಿಎಲ್ ನರಸಿಂಹ ರಾವ್ ಅವರು ಮಾತನಾಡಿ, ಪರಿಶಿಷ್ಟ ಪಂಗಡ (ಎಸ್‌ಟಿ) ಮತ್ತು ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಹೆಚ್ಚಿಸುವ ಬಗ್ಗೆ ರಾಜ್ಯ ಸರ್ಕಾರದ ನಿರ್ಧಾರ ತೆಗೆದುಕೊಂಡಿತ್ತು ಎಂದರು.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಕ್ಷವು ವ್ಯವಸ್ಥಿತ ವಿಧಾನವನ್ನು ಅನುಸರಿಸುತ್ತಿದೆ. ವಿರೋಧ ಪಕ್ಷಗಳು ಅಭ್ಯರ್ಥಿಯನ್ನು ಮೊದಲು ಘೋಷಿಸಿದ ಮಾತ್ರಕ್ಕೆ ಚುನಾವಣೆಯಲ್ಲಿ ಗೆಲ್ಲುತ್ತಾರೆಂಬ ಅರ್ಥವಲ್ಲ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com