ಮತ್ತೊಂದು ನೈತಿಕ ಪೊಲೀಸ್‌ ಗಿರಿ: ಹಿಂದೂ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನಿಗೆ ಥಳಿತ

ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿಯ ಘಟನೆ ವರದಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಬಳಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನೊಬ್ಬ ಹಿಂದೂ ಸ್ನೇಹಿತೆಯೊಂದಿಗೆ ಮಾತನಾಡಿದ್ದಕ್ಕಾಗಿ ಆತನ ಮೇಲೆ ಗ್ಯಾಂಗ್‌ವೊಂದು ಹಲ್ಲೆ ನಡೆಸಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಥಳಿತ (ಸಾಂದರ್ಭಿಕ ಚಿತ್ರ)
ಥಳಿತ (ಸಾಂದರ್ಭಿಕ ಚಿತ್ರ)

ಮಂಗಳೂರು: ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್‌ ಗಿರಿ ಘಟನೆ ವರದಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಬಳಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನೊಬ್ಬ ಹಿಂದೂ ಸ್ನೇಹಿತೆಯೊಂದಿಗೆ ಮಾತನಾಡಿದ್ದಕ್ಕಾಗಿ ಆತನ ಮೇಲೆ ಗ್ಯಾಂಗ್‌ವೊಂದು ಹಲ್ಲೆ ನಡೆಸಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಸಂತ್ರಸ್ತನನ್ನು ಮೊಹಮ್ಮದ್ ಜಹೀರ್ (22) ಎಂದು ಗುರುತಿಸಲಾಗಿದೆ. ಗಾಯಗೊಂಡ ಯುವಕನನ್ನು ನಂತರ ಆಸ್ಪತ್ರೆಗೆ ದಾಖಲಿಸಲಾಯಿತು.

ಈ ಕೃತ್ಯದ ಹಿಂದೆ ಬಜರಂಗದಳದ ಕಾರ್ಯಕರ್ತರು ಇರಬಹುದು ಎಂದು ಶಂಕಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 
ಯುವಕನ ದೂರಿನ ಆಧಾರದ ಮೇಲೆ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಸ್ಲಿಂ ಯುವಕ ಹಿಂದೂ ಯುವತಿಯೊಂದಿಗೆ ಮಾತನಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ನಂತರ ಬಜರಂಗದಳದ ಕಾರ್ಯಕರ್ತರ ಗುಂಪು ಬಸ್‌ಗೆ ಏರಿತು. ಯುವಕನಿಗೆ ಥಳಿಸುವ ಮುನ್ನ ಆತನನ್ನು ಬಸ್‌ನಿಂದ ಕೆಳಗಿಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಸ್ಥಳೀಯ ಎಸ್‌ಡಿಪಿಐ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com