ಹಾಸನ: 85 ವರ್ಷದ ವೃದ್ಧೆ ಮೇಲೆ ಮಾನಸಿಕ ಅಸ್ವಸ್ಥನಿಂದ ಅತ್ಯಾಚಾರ, ಕೊಲೆ
85 ವರ್ಷದ ವೃದ್ಧೆ ಮೇಲೆ 30 ವರ್ಷದ ಯುವಕನೊಬ್ಬ ಅತ್ಯಾಚಾರವೆಸಗಿರುವ ದಾರುಣ ಘಟನೆ ಅರಸೀಕೆರೆ ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಈ ಘಟನೆ ಇತ್ತೀಚೆಗೆ ನಡೆದಿದೆ ಎಂದು ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದಾರೆ.
Published: 07th April 2023 08:43 AM | Last Updated: 07th April 2023 08:43 AM | A+A A-

ಸಾಂದರ್ಭಿಕ ಚಿತ್ರ
ಹಾಸನ: 85 ವರ್ಷದ ವೃದ್ಧೆ ಮೇಲೆ 30 ವರ್ಷದ ಯುವಕನೊಬ್ಬ ಅತ್ಯಾಚಾರವೆಸಗಿರುವ ದಾರುಣ ಘಟನೆ ಅರಸೀಕೆರೆ ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಈ ಘಟನೆ ಇತ್ತೀಚೆಗೆ ನಡೆದಿದೆ ಎಂದು ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದಾರೆ.
ಆರೋಪಿ ಮಿಥುನ್ ಕುಮಾರ್ ಮತ್ತು ಆತನ ತಾಯಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಮಾಡಾಳು ಗ್ರಾಮದ ಸಂತ್ರಸ್ತೆ, ದಾರಿ ತಪ್ಪಿ ನಡೆಯುತ್ತಿರುವುದನ್ನು ಗಮನಿಸಿದ್ದಾರೆ. ಆಗ ಆಕೆಯನ್ನು ತನ್ನ ಮೊಬೈಕ್ ನಲ್ಲಿ ಮನೆಗೆ ಡ್ರಾಪ್ ಮಾಡುವಂತೆ ಆರೋಪಿ ತಾಯಿ ಆತನಿಗೆ ಹೇಳಿದ್ದಾರೆ.
ಸಂತ್ರಸ್ತೆಯನ್ನು ತನ್ನ ದ್ವಿಚಕ್ರವಾಹನದಲ್ಲಿ ಕೂರಿಸಿಕೊಂಡ ಮಿಥುನ್, ಸಮೀಪದ ಹೊಲಕ್ಕೆ ಕರೆದೊಯ್ದುಆಕೆಗೆ ಕಿರುಕುಳ ನೀಡಲು ಯತ್ನಿಸಿದ್ದಾನೆ. ಆಕೆ ಪ್ರತಿರೋಧ ವ್ಯಕ್ತಪಡಿಸಿದಾಗ ಆರೋಪಿ ಆಕೆಯ ಹಣೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ನಂತರ ಸಂತ್ರಸ್ತೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಿಥುನ್ ಕೆಲವು ವರ್ಷಗಳ ಹಿಂದೆ ವಯಸ್ಸಾದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದಾಗ ಸಿಕ್ಕಿಬಿದ್ದಿದ್ದಎಂದು ಗ್ರಾಮಸ್ಥರೊಬ್ಬರು ಹೇಳಿದ್ದಾರೆ. ಆದರೆ ಗ್ರಾಮಸ್ಥರು ಎಚ್ಚರಿಕೆ ನೀಡಿ ಸಮಸ್ಯೆ ಬಗೆಹರಿಸಿದ್ದರು. ಆತ ಮಾನಸಿಕ ಅಸ್ವಸ್ಥ ಎಂದು ಪೊಲೀಸರು ಶಂಕಿಸಿದ್ದಾರೆ. ಮಿಥುನ್ ಯಾವುದೇ ಹಿಂಜರಿಕೆಯಿಲ್ಲದೆ ಘಟನೆಯನ್ನು ವಿವರಿಸಿದ್ದಾನೆ ಮತ್ತು ಅವನು "ಮಗುವಿನಂತೆ ವರ್ತಿಸುತ್ತಾನೆ" ಎಂದು ಪೊಲೀಸರು ತಿಳಿಸಿದ್ದಾರೆ.