ಹಾವೇರಿ: ಪ್ರೀತಿಸಿದ ಹುಡುಗನಿಗಾಗಿ ನಿಶ್ಚಿತಾರ್ಥ ಮಾಡಿಕೊಂಡ ಯುವಕನ ಕುತ್ತಿಗೆಗೆ ಇರಿದ ಅಪ್ರಾಪ್ತೆ!
ಪ್ರೀತಿಸಿದ ಹುಡುಗನಿಗಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನ ಕುತ್ತಿಗೆಗೆ ಅಪ್ರಾಪ್ತ ವಯಸ್ಸಿನ ಯುವತಿ ಚಾಕು ಇರಿದಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಡೆದಿದೆ.
Published: 08th April 2023 07:34 PM | Last Updated: 08th April 2023 07:34 PM | A+A A-

ಸಾಂದರ್ಭಿಕ ಚಿತ್ರ
ಹಾವೇರಿ: ಪ್ರೀತಿಸಿದ ಹುಡುಗನಿಗಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನ ಕುತ್ತಿಗೆಗೆ ಅಪ್ರಾಪ್ತ ವಯಸ್ಸಿನ ಯುವತಿ ಚಾಕು ಇರಿದಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಡೆದಿದೆ.
ಬಾವಿ ಪತಿಯನ್ನು ಪಾರ್ಕ್ ಗೆ ಕರೆದ ಅಪ್ರಾಪ್ತ ಬಾಲಕಿ, ಗಿಫ್ಟ್ ಕೊಡುವ ನೆಪದಲ್ಲಿ ಯುವಕನಿಗೆ ಶಿಲುಬೆ ಥರ ಕೈ ಕಟ್ಟಿಕೊಂಡು ಇರಲು ಹೇಳಿದ್ದಾಳೆ. ನಂತರ ಯುವಕ ದೇವೇಂದ್ರಗೌಡನ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾಳೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ದೇವೇಂದ್ರಗೌಡನ ಜೊತೆಗೆ ಮಾರ್ಚ್ 3ರಂದು ಅಪ್ರಾಪ್ತ ಬಾಲಕಿಯ ನಿಶ್ಚಿತಾರ್ಥ ನಡೆದಿತ್ತು. ಆದರೆ ಈಗ 17 ವರ್ಷದ ಬಾಲಕಿಯ ಕೃತ್ಯಕ್ಕೆ ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ. ಬಾಲಕಿ ವಿರುದ್ಧ ಯುವಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಕರಣ ಗಂಭೀರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಅಪ್ರಾಪ್ತ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಹಲಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.