ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ
ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ

ಬಂಡಾಯ ನಾಯಕರ ಮನವೊಲಿಸುವ ಪ್ರಯತ್ನ ನಡೆಸಲಾಗುತ್ತದೆ: ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ

ನಿರೀಕ್ಷೆಗಳನ್ನಿಟ್ಟುಕೊಂಡಿದ್ದ ಅಭ್ಯರ್ಥಿಗಳಿಕೆ ಪಕ್ಷದ ಟಿಕೆಟ್ ಕೈತಪ್ಪಿದಾಗ ನಿರಾಸೆಯಾಗುವುದು ಸಹಜ, ಅವರನ್ನು ಮನವೊಲಿಸುವ ಪ್ರಯತ್ನಗಳನ್ನು ನಡೆಸಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಅವರು ಶನಿವಾರ ಹೇಳಿದರು.
Published on

ಬೆಳಗಾವಿ: ನಿರೀಕ್ಷೆಗಳನ್ನಿಟ್ಟುಕೊಂಡಿದ್ದ ಅಭ್ಯರ್ಥಿಗಳಿಕೆ ಪಕ್ಷದ ಟಿಕೆಟ್ ಕೈತಪ್ಪಿದಾಗ ನಿರಾಸೆಯಾಗುವುದು ಸಹಜ, ಅವರನ್ನು ಮನವೊಲಿಸುವ ಪ್ರಯತ್ನಗಳನ್ನು ನಡೆಸಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಅವರು ಶನಿವಾರ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಕಾಕ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಹಾಂತೇಶ ಕಡಾಡಿ ಕಣಕ್ಕಿಳಿದಿದ್ದಾರೆ. ಆಯಾ ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿಯನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ್ದು, ಅದರ ತೀರ್ಮಾನವೇ ಅಂತಿಮ. ನಾವು ಶಿಫಾರಸು ಮಾಡಿದ ಅಭ್ಯರ್ಥಿಯನ್ನು ಹೈಕಮಾಂಡ್ ಆಯ್ಕೆ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.

ಪಕ್ಷದ ವಿರುದ್ಧ ಬಂಡಾಯವೆದ್ದಿರುವ ಕಾಂಗ್ರೆಸ್ ನಾಯಕರ ಮನವೊಲಿಸಲು ನಾವು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ. ಟಿಕೆಟ್‌ ನೀಡಿದ ಅಭ್ಯರ್ಥಿಯ ಗೆಲುವಿಗೆ ಸಹಕರಿಸಬೇಕೆಂದು ಸೂಚನೆ ನೀಡಲಾಗಿದೆ. ಆಕಾಂಕ್ಷಿಗಳಪಟ್ಟಿ ಬಳಹ ಇದೆ ಆತ್ಮೀಯರಿಗೆ ಸಿಗಬೇಕೆಂಬುವ ನಿರ್ಧಾರ ನಮ್ಮ ಕೈಯಲಿಲ್ಲ ಅದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ತಿಳಿಸಿದರು.

ಜಿಲ್ಲಾಧ್ಯಂತ ಬಂಡಾಯ ಇಲ್ಲ, ಕೆಲವೊಂದು ಕ್ಷೇತ್ರದಲ್ಲಿ ಇದೆ. ಎಲ್ಲವನ್ನು ಸರಿ ಮಾಡಲಾಗುವುದು. ಎರಡನೇಯ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶೀಘ್ರವೇ ಮೂರನೇಯ ಪಟ್ಟಿ ಪ್ರಕಟ ಮಾಡಲಾಗುವುದು. ನಾಲ್ಕನೆಯ ಪಟ್ಟಿ ಆದರೂ ಆಗಬಹುದು. ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಅಳೆದು ತೂಗಿ ಪ್ರಭಾವಿ ಅಭ್ಯರ್ಥಿಯನ್ನು ಅಖಾಡಕ್ಕೆ ಇಳಿಸಲಾಗುತ್ತಿದೆ ಎಂದರು.

ಮೋದಿ ಮೇಲಿಂದ ಮೇಲೆ ರಾಜ್ಯಕ್ಕೆ ಬರುತ್ತಿದ್ದಾರೆ ಇದರಿಂದ ನಿಮ್ಮ ಪಕ್ಷಕ್ಕೆ ಹಿನ್ನಡೆಯಾಗಬಹುದಾ ಎಂಬ ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಬಂದರೆ ಬರಲ್ಲಿ, ಅವರ ಪಕ್ಷದ ಪ್ರಚಾರಕ್ಕೆ ಅವರು ಬರುತ್ತಾರೆ. ಕಾಂಗ್ರೆಸ್‌ ನಾಯಕರು ತಮ್ಮ ಕ್ಷೇತ್ರದಲ್ಲಿ ಕೆಲಸಗಳ ಆಧಾರದ ಮೇಲೆ ಗೆಲುವು ಸಾಧಿಸುತ್ತಾರೆ. ಆದರೆ, ನಮ್ಮ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆ ಮತ್ತು ಮಾಡಿದ ಕೆಲಸಗಳ ಆಧಾರದ ಮೇಲೆ ವಿಜಯಶಾಲಿಯಾಗಲಿದೆ. ಮೋದಿ ಆಗಮನದಿಂದ ರಾಜ್ಯದಲ್ಲಿ ಯಾವುದೇ ರೀತಿ ಬದಲಾವಣೆ ಆಗಲು ಸಾಧ್ಯವಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com