
ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದು, ರ್ಯಾಡಿಸನ್ ಹೊಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಇಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮೋದಿ ಭೇಟಿ ನೀಡಲಿದ್ದು, ಈ ವೇಳೆ ಸಫಾರಿ ನಡೆಸಲಿದ್ದಾರೆ.
ಮೈಸೂರು ಮತ್ತು ಚಾಮರಾಜನಗರಕ್ಕೆ ಭೇಟಿ ನೀಡಲಿರುವ ಮೋದಿ, ‘ಹುಲಿ ಯೋಜನೆ’ಗೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಆಯೋಜಿಸಿರುವ ಮೂರು ದಿನಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಹುಲಿ ಯೋಜನೆಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅವರು ಇತ್ತೀಚಿನ ಹುಲಿ ಗಣತಿ ವರದಿಯನ್ನು ಸಹ ಬಿಡುಗಡೆ ಮಾಡಲಿದ್ದಾರೆ.
Welcome to Mysuru beloved PM @narendramodi ji. pic.twitter.com/9G8dnCYMLx
— Pratap Simha (@mepratap) April 8, 2023
ಪ್ರಧಾನಿ ಮೋದಿ ಬಂಡೀಪುರಕ್ಕೆ ಭೇಟಿ ನೀಡಿದ ವೇಳೆ, ಇತ್ತೀಚಿಗೆ ಮುಕ್ತಾಯಗೊಂಡ ಮ್ಯಾನೇಜ್‌ಮೆಂಟ್ ಎಫೆಕ್ಟಿವ್‌ನೆಸ್ ಮೌಲ್ಯಮಾಪನ ಅಭಿಯಾನದ 5 ನೇ ಆವೃತ್ತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹುಲಿ ಮೀಸಲು ಕ್ಷೇತ್ರ ನಿರ್ದೇಶಕರೊಂದಿಗೆ ಸಂವಾದ ನಡೆಸಲಿದ್ದಾರೆ.
ಇದನ್ನೂ ಓದಿ: ಚಾಮರಾಜನಗರ: ವಿದ್ಯುತ್ ಸ್ಪರ್ಶಿಸಿ ಗಾಯಗೊಂಡಿದ್ದ ಆನೆ ರಕ್ಷಣೆ, ಬಂಡೀಪುರ ಸಿಬ್ಬಂದಿ ಶ್ಲಾಘಿಸಿದ ಪ್ರಧಾನಿ ಮೋದಿ
ಇದೇ ವೇಳೆ ಪ್ರಧಾನಿ ಮೋದಿ ಇಂಟರ್ನ್ಯಾಷನಲ್ ಬಿಗ್ ಕ್ಯಾಟ್ಸ್ ಅಲೈಯನ್ಸ್ (ಐಬಿಸಿಎ) ಸಹ ಉದ್ಘಾಟನೆ ಮಾಡಲಿದ್ದಾರೆ.
ಹುಲಿ, ಸಿಂಹ, ಚಿರತೆ, ಹಿಮ ಚಿರತೆ, ಹಾಗೂ ಜಾಗ್ವಾರ್ ಪ್ರಬೇಧದ ಪ್ರಾಣಿಗಳಿಗೆ ಆಶ್ರಯ ನೀಡುವ ಶ್ರೇಣಿಯ ದೇಶಗಳ ಸದಸ್ಯತ್ವದೊಂದಿಗೆ ಐಬಿಸಿಎ ನ್ನು ಆರಂಭಿಸಲಾಗುತ್ತಿದೆ.