ಬೆಂಗಳೂರು: ನಕಲಿ ಪಾಸ್‌ಪೋರ್ಟ್‌ ಮೂಲಕ ಬೆಂಗಳೂರಿಗೆ ಬಂದಿದ್ದ ಇಬ್ಬರು ಬಾಂಗ್ಲಾದೇಶ ಪ್ರಜೆಗಳ ಬಂಧನ

ನಕಲಿ ಪಾಸ್‌ಪೋರ್ಟ್‌ ಮೂಲಕ ಬೆಂಗಳೂರಿಗೆ ಬಂದಿದ್ದ ಇಬ್ಬರು ಬಾಂಗ್ಲಾದೇಶ ಪ್ರಜೆಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಕಲಿ ಪಾಸ್‌ಪೋರ್ಟ್‌ ಮೂಲಕ ಬೆಂಗಳೂರಿಗೆ ಬಂದಿದ್ದ ಇಬ್ಬರು ಬಾಂಗ್ಲಾದೇಶ ಪ್ರಜೆಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿಗಳನ್ನು ಲಿಯಾಕತ್ ಅಲಿ ಮತ್ತು ರಿಜಾಲ್ ಶೇಖ್ ಎಂದು ಗುರ್ತಿಸಲಾಗಿದೆ. ಇವರಿಬ್ಬರೂ ಇಂಡಿಗೋ ವಿಮಾನದಲ್ಲಿ ಶುಕ್ರವಾರ ಸಿಂಗಾಪುರದಿಂದ ಬೆಂಗಳೂರಿಗೆ ಬಂದಿದ್ದರು. ವಲಸೆ ತಪಾಸಣೆ ವೇಳೆ ಇಬ್ಬರು ನಕಲಿ ಪಾಸ್ ಪೋರ್ಟ್ ನಿಂದ ನಗರಕ್ಕೆ ಬಂದಿರುವುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ಅಲಿ ನಕಲಿ ಪಾಸ್‌ಪೋರ್ಟ್‌ನಲ್ಲಿ ತನ್ನ ಹೆಸರನ್ನು ಲಿಯಾಕತ್ ಶೇಖ್ ಎಂದು ಬದಲಾಯಿಸಿಕೊಂಡಿದ್ದರೆ, ರಿಜಾಲ್ ಶೇಖ್ ತನ್ನ ಹೆಸರನ್ನು ರೀಗನ್ ಶೇಖ್ ಎಂದು ಬದಲಾಯಿಸಿಕೊಂಡಿದ್ದಾನೆಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್ಆರ್ಆರ್ಒ) ಅಧಿಕಾರಿಯ ದೂರಿನ ಆಧಾರದ ಮೇಲೆ, ಪಾಸ್​ಪೋರ್ಟ್ ಕಾಯ್ದೆಯ ಸೆಕ್ಷನ್ 12 (1 ಎ) (ಎ) (ಪಾಸ್ಪೋರ್ಟ್ಗಾಗಿ ಅರ್ಜಿ ಸಲ್ಲಿಸುವುದು ಅಥವಾ ಅವರ ರಾಷ್ಟ್ರೀಯತೆಯ ಬಗ್ಗೆ ಮಾಹಿತಿಯನ್ನು ಮರೆಮಾಚುವ ಮೂಲಕ ಪಾಸ್​ಪೋರ್ಟ್ ಪಡೆಯುವುದು ಅಥವಾ ನಕಲಿ ಪಾಸ್​ಪೋರ್ಟ್ ಅಥವಾ ಯಾವುದೇ ಪ್ರಯಾಣ ದಾಖಲೆಯನ್ನು ಹೊಂದಿರುವುದು) ಮತ್ತು 14 (ಎ) (ಎ) (ಭಾರತದ ಯಾವುದೇ ಪ್ರದೇಶವನ್ನು ಪ್ರವೇಶಿಸುವುದು) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದದು, ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com