ನಾಯಕರಿಗೆ ಸಿಎಂ ಆಗುವ ಕನಸು ಸಹಜ; ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಘೋಷಣೆ ಮಾಡುವ ಸಂಪ್ರದಾಯ ಕಾಂಗ್ರೆಸ್ ನಲ್ಲಿಲ್ಲ: ತರೂರ್

ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಘೋಷಣೆ ಮಾಡುವ ಸಂಪ್ರದಾಯವಿಲ್ಲ. ಇದು ಆರೋಗ್ಯಕರ ಪ್ರಕ್ರಿಯೆಯಾಗಿದ್ದು, ಮೊದಲು ಚುನಾವಣೆ ಗೆಲ್ಲಬೇಕು, ನಂತರ ಈ ವಿಚಾರವಾಗಿ ಚರ್ಚೆ ಮಾಡಬಹುದು ಎಂದು ಶಶಿ ತರೂರ್ ಹೇಳಿದ್ದಾರೆ.
ಶಶಿ ತರೂರ್
ಶಶಿ ತರೂರ್

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಘೋಷಣೆ ಮಾಡುವ ಸಂಪ್ರದಾಯವಿಲ್ಲ. ಇದು ಆರೋಗ್ಯಕರ ಪ್ರಕ್ರಿಯೆಯಾಗಿದ್ದು, ಮೊದಲು ಚುನಾವಣೆ ಗೆಲ್ಲಬೇಕು, ನಂತರ ಈ ವಿಚಾರವಾಗಿ ಚರ್ಚೆ ಮಾಡಬಹುದು ಎಂದು ಶಶಿ ತರೂರ್ ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿ ಆಗುವುದಾದರೆ ನನ್ನ ಅವಕಾಶವನ್ನು ಬಿಟ್ಟುಕೊಡುತ್ತೆನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ಸಂಬಂಧ ಪ್ರತಿಕ್ರಿಯಿರುವ ಶಶಿ ತರೂರ್, ಖರ್ಗೆ ಪಕ್ಷದ ಅತ್ಯಂತ ಗೌರವಾನ್ವಿತ ಅಧ್ಯಕ್ಷರು... ಅವರಿಗೆ ನಾವೆಲ್ಲರೂ ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ. ಚುನಾವಣೆಗೂ ಮುನ್ನ ಸಿಎಂ ಅಭ್ಯರ್ಥಿಯ ಬಗ್ಗೆ ಚರ್ಚೆ ಮಾಡದಿರುವ ಸಂಪ್ರದಾಯ ಕಾಂಗ್ರೆಸ್ಸಿಗಿದೆ, ಇದು ಆರೋಗ್ಯಕರ ಅಭ್ಯಾಸವಾಗಿದೆ ಎಂದು ಅವರು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬಂದರೆ, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಸಂಘರ್ಷ ವ್ಯಕ್ತವಾಗಬಹುದೇ ಎಂದು ಕೇಳಿದಾಗ, ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ ಒಗ್ಗಟ್ಟಾಗಿದ್ದೇವೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಸತ್ಯ ಏನೆಂದರೆ ಎಲ್ಲಾ ಪಕ್ಷದಲ್ಲೂ ನಾಯಕರ ಸಾಮರ್ಥ್ಯಗಳು ಹಾಗೂ ಆಕಾಂಕ್ಷೆಗಳ ಮಧ್ಯೆ ಸ್ಪರ್ಧೆ ಸಹಜ ಎಂದಿದ್ದಾರೆ.

"ದಿನದ ಕೊನೆಯಲ್ಲಿ, ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದು ಸರ್ಕಾರವನ್ನು ರಚಿಸಿದಾಗ, ಒಬ್ಬ ವ್ಯಕ್ತಿ ಸಿಎಂ ಆಗುತ್ತಾನೆ ಮತ್ತು ಇತರರು ಮುಂದುವರಿಯುತ್ತಾರೆ" ಎಂದು ಅವರು ಹೇಳಿದರು. ಕೇರಳದಂತಹ ರಾಜ್ಯಗಳಲ್ಲಿ ಬಿಜೆಪಿಯ ಕ್ರಿಶ್ಚಿಯನ್ ಪ್ರಭಾವವನ್ನು ತರೂರ್ ಟೀಕಿಸಿದರು. ಕೇಸರಿ ಪಕ್ಷವು ಕರ್ನಾಟಕದಲ್ಲಿ ಇಂತಹ ಪ್ರಯತ್ನಗಳನ್ನು ಮಾಡಬಹುದು ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಯಾರಾದರೂ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ. ಈಗ ಪಕ್ಷ ಒಗ್ಗಟ್ಟಿನಿಂದ ಹೋರಾಡಲು ತೀರ್ಮಾನಿಸಿದ್ದಾರೆ. ರಾಜ್ಯದ ಜನರ ಹಿತಾಸಕ್ತಿ ಕಾಯಲು ಈ ಸರ್ಕಾರವನ್ನ ಕಿತ್ತೊಗೆಯಲೇ ಬೇಕೆಂದು ಶಶಿ ತರೂರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com