ಮಂಗಳೂರು: ಕಂದಕಕ್ಕೆ ಉರುಳಿದ ಕಾರು; ಮಹಿಳೆ ಸಾವು, ಪಂಚಾಯಿತಿ ಅಧ್ಯಕ್ಷೆ ಸೇರಿ ನಾಲ್ವರಿಗೆ ಗಾಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಕಮರಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದು, ಉಜಿರೆ ಗ್ರಾಮ ಪಂಚಾಯಿತಿ ಮುಖ್ಯಸ್ಥೆ ಸೇರಿದಂತೆ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಚಾರ್ಮಾಡಿ ಘಾಟ್ ಬಳಿ ಕಮರಿಗೆ ಬಿದ್ದ ಕಾರು
ಚಾರ್ಮಾಡಿ ಘಾಟ್ ಬಳಿ ಕಮರಿಗೆ ಬಿದ್ದ ಕಾರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಕಮರಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದು, ಉಜಿರೆ ಗ್ರಾಮ ಪಂಚಾಯಿತಿ ಮುಖ್ಯಸ್ಥೆ ಸೇರಿದಂತೆ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೃತರನ್ನು ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾವತಿ ಶೆಟ್ಟಿ ಅವರ ಸಂಬಂಧಿ ಸರೋಜಿನಿ ಶೆಟ್ಟಿ ಎಂದು ಗುರುತಿಸಲಾಗಿದೆ.

ಭಾನುವಾರ ರಾತ್ರಿ ಚಾರ್ಮಾಡಿ ಘಾಟ್‌ನ ಎರಡನೇ ತಿರುವಿನಲ್ಲಿ ಕಾರು ಕಮರಿಗೆ ಬಿದ್ದಿದ್ದು, ಅಪಘಾತದಲ್ಲಿ ಪಂಚಾಯಿತಿ ಮುಖ್ಯಸ್ಥೆ, ಅವರ ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಗ ಸಮೃದ್ಧ್, ಸಾಕ್ಷಿ ಮತ್ತು ಕಾರು ಚಾಲಕ ಅರುಣ್ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇವರೆಲ್ಲರೂ ಶೃಂಗೇರಿಯ ಕೊಪ್ಪದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಈ ದುರ್ಘಟನೆಯಲ್ಲಿ ಪುಷ್ಪಾವತಿ ಶೆಟ್ಟಿ ಅವರ ಕೈ ಮೂಳೆ ಮುರಿದಿದ್ದು, ಅವರ ಮಗಳ ತಲೆಗೆ ಗಾಯವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com