KS ಈಶ್ವರಪ್ಪ ನಿವೃತ್ತಿ ವಿರೋಧಿಸಿ, ಶಿವಮೊಗ್ಗ ಪಾಲಿಕೆ ಸದಸ್ಯರಿಂದ ಸಾಮೂಹಿಕ‌ ರಾಜೀನಾಮೆ

ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರ ರಾಜಕೀಯ ನಿವೃತ್ತಿ ವಿರೋಧಿಸಿ ಶಿವಮೊಗ್ಗ ಪಾಲಿಕೆ ಸದಸ್ಯರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ.
ಈಶ್ವರಪ್ಪ ಬೆಂಬಲಿಗರಿಂದ ಸಾಮೂಹಿಕ ರಾಜಿನಾಮೆ
ಈಶ್ವರಪ್ಪ ಬೆಂಬಲಿಗರಿಂದ ಸಾಮೂಹಿಕ ರಾಜಿನಾಮೆ

ಶಿವಮೊಗ್ಗ: ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರ ರಾಜಕೀಯ ನಿವೃತ್ತಿ ವಿರೋಧಿಸಿ ಶಿವಮೊಗ್ಗ ಪಾಲಿಕೆ ಸದಸ್ಯರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ.

ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ನಿನ್ನೆಯಷ್ಟೇ  ಚುನಾವಣಾ ರಾಜಕೀಯ ನಿವೃತ್ತಿಯನ್ನು ಘೋಷಣೆ ಮಾಡಿದ್ದರು. ಆದರೆ ಈಗ ಅವರ ಈ ನಿರ್ಧಾರಕ್ಕೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂಬ ಒತ್ತಾಯ ಕೇಳಿಬಂದಿದೆ. 

ಅಲ್ಲದೆ, ಮೇಯರ್- ಉಪಮೇಯರ್ ಸೇರಿದಂತೆ ಎಲ್ಲಾ 19 ಮಂದಿ ಬಿಜೆಪಿ ಸದಸ್ಯರು  ರಾಜೀನಾಮೆ ಸಲ್ಲಿಸಿದ್ದಾರೆ. ಅದೇ ರೀತಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಸಹ ರಾಜೀನಾಮೆಗೆ ನಿರ್ಧಾರ ಮಾಡಿದ್ದು, ಬೆಂಗಳೂರಿಗೆ ತೆರಳಿ ಯಡಿಯೂರಪ್ಪ ಅವರನ್ನು ಭೇಟಿಯಾಗಲು ನಿರ್ಧಾರಿಸಿದ್ದಾರೆ.

ಈಶ್ವರಪ್ಪ ಅಭಿಮಾನಿಗಳು ಬಿಜೆಪಿ ಜಿಲ್ಲಾ ಕಚೇರಿ ಎದುರು ಬುಧವಾರ(ಎ.12) ಪ್ರತಿಭಟನೆ ನಡೆಸಿದ್ದಾರೆ. ಪಕ್ಷದ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com