ಹೆಣ್ಣು ಮಕ್ಕಳಿಗೆ ಉಚಿತ ಸ್ಯಾನಿಟರಿ ಪ್ಯಾಡ್: ಚುನಾವಣೆ ಬಳಿಕ 'ಶುಚಿ ಯೋಜನೆ' ಪುನರಾರಂಭ?
ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಿಸುವುದು ಸೇರಿದಂತೆ ಋತುಸ್ರಾವ ನೈರ್ಮಲ್ಯದ ಬಗ್ಗೆ ಏಕರೂಪದ ರಾಷ್ಟ್ರೀಯ ನೀತಿ ಜಾರಿಗೆ ತರಲು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನವನ್ನು ನೀಡಿದ್ದು, ಇದರ ಬೆನ್ನಲ್ಲೇ ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ಶುಚಿ ಯೋಜನೆ ಪುನರಾರಂಭಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
Published: 13th April 2023 12:54 PM | Last Updated: 13th April 2023 05:09 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಿಸುವುದು ಸೇರಿದಂತೆ ಋತುಸ್ರಾವ ನೈರ್ಮಲ್ಯದ ಬಗ್ಗೆ ಏಕರೂಪದ ರಾಷ್ಟ್ರೀಯ ನೀತಿ ಜಾರಿಗೆ ತರಲು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನವನ್ನು ನೀಡಿದ್ದು, ಇದರ ಬೆನ್ನಲ್ಲೇ ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ಶುಚಿ ಯೋಜನೆ ಪುನರಾರಂಭಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಶಾಲಾ ಮತ್ತು ಕಾಲೇಜು ಹುಡುಗಿಯರಿಗೆ ಸ್ಯಾನಿಟರಿ ನ್ಯಾಪ್ಕಿನ್ಗಳನ್ನು ವಿತರಿಸಲು 2014 ರಲ್ಲಿ ಯೋಜನೆ ಜಾರಿಗೆ ತರಲಾಗಿತ್ತು. ಆದರೆ, ಸಾಂಕ್ರಾಮಿಕ ರೋಗದ ಬಳಿಕ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಮೂರು ವರ್ಷಗಳಿಂದಲೂ ಯೋಜನೆ ಸ್ಥಗಿತಗೊಂಡಿತ್ತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತರಾದ ಡಿ ರಂದೀಪ್ ಅವರು ಮಾತನಾಡಿ, ರಾಜ್ಯ ವಿಧಾನಸಭಾ ಚುನಾವಣೆ ಬಳಿಕ ಯೋಜನೆ ಪುನರಾರಂಭ ಕುರಿತು ಚಿಂತನೆಗಳನ್ನು ನಡೆಸಲಾಗುತ್ತದೆ. ಯೋಜನೆಯನ್ನು ಪುನರಾರಂಭಿಸುವ ಕುರಿತು ಸರ್ಕಾರವನ್ನು ಸಂಪರ್ಕಿಸಲಾಗಿದೆ. ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಚುನಾವಣೆ ಪೂರ್ಣಗೊಂಡ ಬಳಿಕ ಯೋಜನೆ ಪುನರಾರಂಭವಾಗಲಿದೆ ಎಂದು ಹೇಳಿದ್ದಾರೆ.
ಯೋಜನೆಯು ಇದೀಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿದ್ದು, ಇದನ್ನು ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.