ಮಡಿಕೇರಿ: ಕೆಎಸ್ಆರ್ ಟಿಸಿ ಬಸ್ ಕಾರು ನಡುವೆ ಭೀಕರ ಅಪಘಾತ; ಆರು ಮಂದಿ ದುರ್ಮರಣ
ಮಂಗಳೂರು-ಮಡಿಕೇರಿ ಹೆದ್ದಾರಿಯ ಸಂಪಾಜೆ ಪೆಟ್ರೋಲ್ ಪಂಪ್ ಬಳಿ ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.
Published: 14th April 2023 04:36 PM | Last Updated: 15th April 2023 01:47 PM | A+A A-

ಪ್ರತ್ಯಕ್ಷ ದೃಶ್ಯ
ಮಡಿಕೇರಿ: ಮಂಗಳೂರು-ಮಡಿಕೇರಿ ಹೆದ್ದಾರಿಯ ಸಂಪಾಜೆ ಪೆಟ್ರೋಲ್ ಪಂಪ್ ಬಳಿ ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.
ಕೆಎಸ್ಆರ್ ಟಿಸಿ ಬಸ್ ಮತ್ತು ಸ್ವಿಫ್ಟ್ ಕಾರಿನ ನಡುವೆ ಈ ಭೀಕರ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಕಾರಿನಲ್ಲಿ ಪ್ರಮಾಣಿಸುತ್ತಿದ್ದ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ. ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನುಳಿದ ಮೂವರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಸಾವನ್ನಪ್ಪಿದ್ದಾರೆ.
ಕೆಎಸ್ಆರ್ ಟಿಸಿ ಬಸ್ ಮಂಗಳೂರಿನಿಂದ ಮಡಿಕೇರಿ ಕಡೆಗೆ ಹೋಗುತ್ತಿತ್ತು. ಇನ್ನು ಕಾರು ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಮಡಿಕೇರಿ: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ, ಪ್ರಾಣಾಪಾಯದಿಂದ ಪಾರು
ಗಂಭೀರವಾಗಿ ಗಾಯಗೊಂಡಿರುವ ಮತ್ತಿಬ್ಬರನ್ನು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.