ಟಿಕೆಟ್ ಸಿಗುವ ವಿಶ್ವಾಸವಿದೆ, ಸಂಜೆವರೆಗೂ ಕಾದು ನೋಡೋಣ; ಹೈಕಮಾಂಡ್​ಗೆ ಮತ್ತೊಂದು ಗಡುವು ನೀಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಟಿಕೆಟ್ ಸಿಗುವ ವಿಶ್ವಾಸವಿದ್ದು, ಮುಂದೆ ಏನು ಮಾಡಬೇಕು ಎನ್ನುವ ಪರಿಸ್ಥಿತಿ ಬರುವುದಿಲ್ಲ ಎಂದು ನಂಬಿದ್ದೇನೆಂದು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶನಿವಾರ ಹೇಳಿದ್ದಾರೆ.
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್
Updated on

ಬೆಂಗಳೂರು: ಟಿಕೆಟ್ ಸಿಗುವ ವಿಶ್ವಾಸವಿದ್ದು, ಮುಂದೆ ಏನು ಮಾಡಬೇಕು ಎನ್ನುವ ಪರಿಸ್ಥಿತಿ ಬರುವುದಿಲ್ಲ ಎಂದು ನಂಬಿದ್ದೇನೆಂದು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶನಿವಾರ ಹೇಳಿದ್ದಾರೆ.

ತಮ್ಮ ನಿವಾಸದ ಮುಂದೆ ಸೇರಿದ್ದ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿರುವ ಶೆಟ್ಟರ್ ಅವರು, ಬಿಎಸ್ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಹಳ್ಳಿ ಹಳ್ಳಿಗೆ ಹೋಗಿ ಪಕ್ಷ ಕಟ್ಟಿದ್ದೇನೆ. ಪಕ್ಷ ನನಗೆ ಎಲ್ಲಾ ಗೌರವಗಳನ್ನು ನೀಡಿದೆ. ಮೊದಲ ಹಾಗೂ ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಯಾಕೆ ಬಂದಿಲ್ಲ ಎಂದು ರಾಜ್ಯದ ಪ್ರಮುಖ ನಾಯಕರು ಕೇಳುತ್ತಿದ್ದಾರೆ. ಆರು ಬಾರಿ ಚುನಾವಣೆಯಲ್ಲಿ  ಸ್ಪರ್ಧಿಸಿ ಗೆದ್ದಿದ್ದೇನೆ.

ಏಳನೇ ಬಾರಿ ಟಿಕೆಟ್ ಕೊಟ್ಟರೆ ಅಧಿಕ ಮತಗಳಿಂದ ಗೆಲ್ಲುತ್ತೇನೆ ಎಂಬ ಅಂಶ ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿ ಮಾತನಾಡಿದ್ದೇನೆ. ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ , ಸಚಿವ ಮುನೇನಕೊಪ್ಪ ಕೂಡ ನನ್ನೊಂದಿಗೆ ಮಾತನಾಡಿದ್ದಾರೆ. ಟಿಕೆಟ್ ಸಿಗುವ ವಿಶ್ವಾಸವಿದೆ. ಇಂದು ಸಾಯಂಕಾಲದವರೆಗೂ ಕಾದು ನೋಡೋಣ ಎಂದು ಹೇಳಿದರು.

ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20ರವರೆಗೆ ಸಮಯವಿದೆ. ಒಂದು ವೇಳೆ ಟಿಕೆಟ್ ಸಿಗದಿದ್ದರೆ, ಏನು ಮಾಡಬೇಕು ಎಂಬುದರ ಕುರಿತು ಚರ್ಚೆ ಮಾಡೋಣ. ಮುಂದೆ ಏನು ಮಾಡಬೇಕು ಎನ್ನುವ ಪರಿಸ್ಥಿತಿ ಬರುವುದಿಲ್ಲ ಎಂಬ ನಂಬಿಕೆಯಿದೆ ಎಂದು ತಿಳಿಸಿದರು.

ರಾಜಕೀಯಕ್ಕೆ ಆಕಸ್ಮಿಕವಾಗಿ ಬಂದವನು ನಾನು. ಸಿಕ್ಕ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಇಲ್ಲಿಯವರೆಗೆ ಬಂದಿದ್ದೇನೆ. ನನ್ನನ್ನು ಲೀಡರ್ ಮತ್ತು ಹೀರೋ ಮಾಡಿದ್ದು ಜನರು. ಯಾವುದೇ ಅಧಿಕಾರದ ಆಸೆಗಾಗಿ ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ. ನಮ್ಮ ಕ್ಷೇತ್ರದ ಜನತೆಯ ಕೆಲಸ ಮಾಡಬೇಕು ಎಂದು ಸ್ಪರ್ಧಿಸಲು ಬಯಸುತ್ತಿದ್ದೇನೆಂದರು.

ಇಷ್ಟು ವರ್ಷ ಪಕ್ಷಕ್ಕಾಗಿ ದುಡಿದಿದ್ದೇನೆ. ಈಗ ಈ ರೀತಿ ನಡೆಸಿಕೊಳ್ಳುತ್ತಿರುವ ಬಗ್ಗೆ ಬೇಸರವಿದೆ. ಸ್ಪರ್ಧೆಗೆ ಇನ್ನೂ ಸಮಯಾವಕಾಶವಿದೆ. ಹೈಕಮಾಂಡ್ ಗೆ ಸಂಜೆವರೆಗೂ ಕಾಲಾವಕಾಶ ಕೊಡೋಣ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com