ಬೆಂಗಳೂರಿನಲ್ಲೊಂದು ಹಿಟ್ ಅಂಡ್ ರನ್ ಪ್ರಕರಣ; ಹರಿಯಾಣ ಮೂಲದ 46 ವರ್ಷದ ಟೆಕ್ಕಿ ಸಾವು
ಹಿಟ್ ಅಂಡ್ ರನ್ ಪ್ರಕರಣದಲ್ಲಿ ಶುಕ್ರವಾರ ಬೆಳ್ಳಂದೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 46 ವರ್ಷದ ಅಮಿತ್ ಭಾರ್ಗವ್ ಎಂಬ ಟೆಕ್ಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Published: 15th April 2023 08:37 AM | Last Updated: 15th April 2023 08:37 AM | A+A A-

ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಹಿಟ್ ಅಂಡ್ ರನ್ ಪ್ರಕರಣದಲ್ಲಿ ಶುಕ್ರವಾರ ಬೆಳ್ಳಂದೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 46 ವರ್ಷದ ಅಮಿತ್ ಭಾರ್ಗವ್ ಎಂಬ ಟೆಕ್ಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹರಿಯಾಣ ಮೂಲದ ಸಂತ್ರಸ್ತೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಕಸವನಹಳ್ಳಿ ಮುಖ್ಯರಸ್ತೆಯ ಖಾಸಗಿ ಕಾಲೇಜು ಬಳಿ ರಾತ್ರಿ 12.30ರ ಸುಮಾರಿಗೆ ವೇಗವಾಗಿ ಬಂದ ಕಾರೊಂದು ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಕಾರು ಚಾಲಕ ಸಂತ್ರಸ್ತನಿಗೆ ಚಿಕಿತ್ಸೆಗೆ ನೆರವಾಗದೆ ಡಿಕ್ಕಿ ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ.
ಬೆಳ್ಳಂದೂರು ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆಗಳು ನಡೆಯುತ್ತಿವೆ.