ಸಿದ್ದರಾಮಯ್ಯಗೆ ಸಿಗದ ಕೋಲಾರ ಕ್ಷೇತ್ರದ ಟಿಕೆಟ್: ಕಾರ್ಯಕರ್ತರ ಆಕ್ರೋಶ, ಕಾಂಗ್ರೆಸ್ ಕಚೇರಿಯ ಪೀಠೋಪಕರಣ ಧ್ವಂಸ
ಕಾಂಗ್ರೆಸ್ ಪಕ್ಷದ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಕೋಲಾರದಿಂದ ಕೋತೂರು ಮಂಜುನಾಥ್ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಕಾರ್ಯಕರ್ತರು, ಪಕ್ಷದ ಕಚೇರಿಯ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ.
Published: 16th April 2023 09:05 AM | Last Updated: 16th April 2023 09:05 AM | A+A A-

ಸಂಗ್ರಹ ಚಿತ್ರ
ಕೋಲಾರ: ಕಾಂಗ್ರೆಸ್ ಪಕ್ಷದ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಕೋಲಾರದಿಂದ ಕೋತೂರು ಮಂಜುನಾಥ್ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಕಾರ್ಯಕರ್ತರು, ಪಕ್ಷದ ಕಚೇರಿಯ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ.
ಸಿದ್ದರಾಮಯ್ಯ ಬದಲಿಗೆ ಕೋತೂರು ಮಂಜುನಾಥ್ ಅವರಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಆಕ್ರೋಶಗೊಂಡ ಪಕ್ಷದ ಕಾರ್ಯಕರ್ತರು, ಪಕ್ಷದ ನಾಯಕತ್ವ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆ ಸಂದರ್ಭದಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ರಾಹುಲ್ ಗಾಂದಿಯವರು ಜೈ ಬಾರತ್ ಕಾರ್ಯಕ್ರಮದ ವ್ಯವಸ್ಥೆ ಮೇಲ್ವಿಚಾರಣೆ ಮಾಡುವ ಸಲುವಾಗಿ ಕೋಲಾರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕಾರ್ಯಕರ್ತರ ಆಕ್ರೋಶವನ್ನು ಎದುರಿಸಬೇಕಾಯಿದು.
ಸಿದ್ದರಾಮಯ್ಯ ಅವರು ಕೋಲಾರದಿಂದ ಕಣಕ್ಕಿಳಿಯುತ್ತಾರೆಂದು ನಿರೀಕ್ಷಿಸಿದ್ದೆವು. ಟಿಕೆಟ್ ಘೋಷಣೆಗೂ ಮುನ್ನ ಕಾಂಗ್ರೆಸ್‌ನ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರ ಸಲಹೆಯನ್ನೇಕೆ ಕೇಳಿಲ್ಲ ಎಂದು ಪ್ರಶ್ನಿಸಿದರು.
ಈ ಬೆಳವಣಿಗೆ ಬಳಿಕ ಡಿಕೆ.ಶಿವಕುಮಾರ್ ಅವರು ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ನಡೆಸಿದರು. ನಂತರ ಯುವ ಕಾಂಗ್ರೆಸ್ ಮುಖಂಡ ಪ್ರವೀಣ್ ಗೌಡ ಅವರ ಮನೆಗೆ ಭೇಟಿ ನೀಡಿ, ಹಿರಿಯ ಕಾಂಗ್ರೆಸ್ ಮುಖಂಡರಾದ ಅನಿಲ್ ಕುಮಾರ್, ನಜೀರ್ ಅಹಮದ್, ಆಶಿಷೇಕ್ ದತ್ತಿ, ಕೋತೂರು ಮಂಜುನಾಥ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರೊಂದಿಗೆ ಮಾತುಕತೆ ನಡೆಸಿದರು.