ಕರ್ನಾಟಕ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಿಂದಾಗಿ ಸರ್ಕಾರದ ಕಾಶಿ ಯಾತ್ರೆ ರದ್ದು
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಅಂಗವಾಗಿ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿದ್ದು, ರಾಜ್ಯ ಸರ್ಕಾರವು 'ಭಾರತ್ ಗೌರವ್ ಕಾಶಿ ದರ್ಶನ' ಯೋಜನೆಯಡಿಯಲ್ಲಿ ವಾರಣಾಸಿ ಮತ್ತು ಅಯೋಧ್ಯೆಗೆ ತನ್ನ ಪ್ರಮುಖ ತೀರ್ಥಯಾತ್ರೆ ಕಾರ್ಯಕ್ರಮವನ್ನು ರದ್ದುಗೊಳಿಸಿದೆ.
Published: 16th April 2023 11:44 AM | Last Updated: 17th April 2023 03:18 PM | A+A A-

ವಿಧಾನಸೌಧ
ಬೆಂಗಳೂರು: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಅಂಗವಾಗಿ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿದ್ದು, ರಾಜ್ಯ ಸರ್ಕಾರವು 'ಭಾರತ ಗೌರವ ಕಾಶಿ ದರ್ಶನ' ಯೋಜನೆಯಡಿಯಲ್ಲಿ ವಾರಣಾಸಿ ಮತ್ತು ಅಯೋಧ್ಯೆಗೆ ತನ್ನ ಪ್ರಮುಖ ತೀರ್ಥಯಾತ್ರೆ ಕಾರ್ಯಕ್ರಮವನ್ನು ರದ್ದುಗೊಳಿಸಿದೆ.
ಏಪ್ರಿಲ್ 14 ಮತ್ತು 28 ರಂದು ಎರಡು ಬ್ಯಾಚ್‌ಗಳಲ್ಲಿ ಯಾತ್ರೆಯನ್ನು ಪ್ರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ, ಚುನಾವಣಾ ಆಯೋಗದ ನಿರ್ದೇಶನದ ನಂತರ ಯಾತ್ರೆಯನ್ನು ರದ್ದುಗೊಳಿಸಲಾಗಿದೆ ಎಂದು ಕಾರ್ಯಕ್ರಮವನ್ನು ಆಯೋಜಿಸುವ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಮಾರ್ಚ್ 29 ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಬುಕಿಂಗ್ ಅನ್ನು ತಕ್ಷಣವೇ ನಿಲ್ಲಿಸುವಂತೆ ಚುನಾವಣಾ ಆಯೋಗವು ಏಪ್ರಿಲ್ 14 ರಂದು ತನ್ನ ಪತ್ರದಲ್ಲಿ ಸೂಚಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರು: ಕಾಶಿ ಯಾತ್ರಾರ್ಥಿಗಳಿಗೆ ಸಹಾಯಧನ ವರ್ಗಾವಣೆ
ಯಾತ್ರೆ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗ ಅನುಮತಿ ನೀಡದ ಕಾರಣ ಅದನ್ನು ರದ್ದುಗೊಳಿಸಲಾಗಿದೆ ಎಂದು ಈ ಮೂಲಕ ತಿಳಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.