ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವರಿಷ್ಠರು
ರಾಜ್ಯ
ಕರ್ನಾಟಕ ವಿಧಾನಸಭೆ ಚುನಾವಣೆ: 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ಕರ್ನಾಟಕ ವಿಧಾನಸಭೆ ಚುನಾವಣೆಯ ನಿಮಿತ್ತ ಭಾರತೀಯ ಜನತಾ ಪಕ್ಷ ತನ್ನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ನಿಮಿತ್ತ ಭಾರತೀಯ ಜನತಾ ಪಕ್ಷ ತನ್ನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ ಇಂದು ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬಿಜೆಪಿ ಬಿಡುಗಡೆ ಮಾಡಿರುವ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಮಿತ್ ಶಾ ಸೇರಿದಂತೆ ರಾಜ್ಯ ನಾಯಕರಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿಎಂ ಬೊಮ್ಮಾಯಿ, ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ನಾಯಕರು ರಾಜ್ಯಾದ್ಯಂತ ಭರ್ಜರಿ ಪ್ರಚಾರ ನಡೆಸಲಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಮೇ 10 ರಂದು ಮತದಾನ ನಡೆಯಲಿದ್ದು, ಮೇ. 13 ಫಲಿತಾಂಶ ಪ್ರಕಟವಾಗಲಿದೆ.
ಬಿಜೆಪಿಯ ಸ್ಟಾರ್ ಪ್ರಚಾರಕ ಪಟ್ಟಿ ಇಂತಿದೆ
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ