
ಬಿಜೆಪಿ ಸಮಾವೇಶ
ಶಿಗ್ಗಾವಿ (ಹಾವೇರಿ): ಶಿಗ್ಗಾಂವಿ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ಬೃಹತ್ ಸಮಾವೇಶವನ್ನು ನಡೆಸಿದ್ದು, ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ನಟ ಕಿಚ್ಚ ಸುದೀಪ್ ಅವರು ಸಾಥ್ ನೀಡಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಚಿತ್ರನಟ ಸುದೀಪ್ ಆಗಮನದ ಹಿನ್ನೆಲೆಯಲ್ಲಿ ಸಹಸ್ರಾರು ಜನರು ಪಟ್ಟಣದ ಕಿತ್ತೂರು ಚನ್ನಮ್ಮ ಸರ್ಕಲ್ ನಲ್ಲಿ ನೆರೆದಿದ್ದರು.
ಮೊದಲಿಗೆ ಕಿತ್ತೂರು ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ರೋಡ್ ಶೋಗೆ ಚಾಲನೆ ನೀಡಲಾಯಿತು.
ಇದನ್ನೂ ಓದಿ: ಚುನಾವಣಾ ಪ್ರಚಾರಕ್ಕೆ ಕಿಚ್ಚ ಸುದೀಪ್ ಎಂಟ್ರಿ: ಸಿಎಂ ಬೊಮ್ಮಾಯಿ ಪರ ಸ್ಟಾರ್ ನಟ ಕ್ಯಾಂಪೇನ್
ತಾಲ್ಲೂಕು ಕ್ರೀಡಾಂಗಣದಲ್ಲಿ ಮಧ್ಯಾಹ್ನ 12.30ಕ್ಕೆ ಬಹಿರಂಗ ಸಮಾವೇಶ ನಡೆಯಿತು., ಮಧ್ಯಾಹ್ನ 1.30ಕ್ಕೆ ತಹಶೀಲ್ದಾರ್ ಕಚೇರಿಯಲ್ಲಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಸಲಿದರು. ಮೆರವಣಿಗೆಯಲ್ಲಿ ಜಗ್ಗಲಿಗೆ ತಂಡ, ಜನಪದ ಕಲಾ ತಂಡಗಳು ಗಮನ ಸೆಳೆಯಿತು.
ಸುಡು ಬಿಸಿಲನ್ನು ಲೆಕ್ಕಿಸದೆ ಜನರು ಕಿಚ್ಚ ಸುದೀಪ್ ನೋಡಲು ಬಂದಿದ್ಜರು. ಈ ವೇಳೆ ಸಚಿವರಾದ ಬಿ.ಸಿ.ಪಾಟೀಲ, ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಇತರರು ಇದ್ದರು.