ಕೆಜಿಎಫ್ ಬಾಬು
ಕೆಜಿಎಫ್ ಬಾಬು

ಬೆಂಗಳೂರು: ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ದಾಳಿ

ಕಾಂಗ್ರೆಸ್ ನಾಯಕ, ಉದ್ಯಮಿ ಕೆಜಿಎಫ್ ಬಾಬು ಯಾನೆ ಯುಸೂಫ್ ಶರೀಫ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಕಾಂಗ್ರೆಸ್ ನಾಯಕ, ಉದ್ಯಮಿ ಕೆಜಿಎಫ್ ಬಾಬು ಯಾನೆ ಯುಸೂಫ್ ಶರೀಫ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.

ಬುಧವಾರ ಬೆಳಗ್ಗೆ ಇಲ್ಲಿನ ಹೈಗ್ರೌಂಡ್ಸ್ ನಲ್ಲಿರುವ ಕೆಜಿಎಫ್ ಬಾಬು ಅವರ ನಿವಾಸಕ್ಕೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ, ಶೋಧ ಕಾರ್ಯ ಕೈಗೊಂಡಿದ್ದಾರೆಂದು ವರದಿಗಳು ತಿಳಿಸಿವೆ.

ಕೆಜಿಎಫ್​ ಬಾಬು ಸೇರಿದಂತೆ ಹಲವು ಕಾಂಗ್ರೆಸ್​ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ 50 ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಇಂದು ಮುಂಜಾನೆಯಿಂದಲೇ ಹೈಗ್ರೌಂಡ್ಸ್ ಬಳಿಯಿರುವ ಕೆಜಿಎಫ್ ಬಾಬು ನಿವಾಸ ರುಕ್ಸಾನಾ ಪ್ಯಾಲೇಸ್​​ನ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.

ಸುಮಾರು 3 ಕಾರುಗಳಲ್ಲಿ ಆಗಮಿಸಿದ ಅಧಿಕಾರಿಗಳು ಮನೆಯಲ್ಲಿ ದಾಖಲಾತಿ, ಲೆಕ್ಕಪತ್ರ ಹಾಗೂ ಬ್ಯಾಂಕ್ ಖಾತೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಯಸಿ ಕೆಜಿಎಫ್ ಬಾಬು ಪ್ರಚಾರವನ್ನು ನಡೆಸಿದ್ದರು. ಆದರೆ ಕಾಂಗ್ರೆಸ್ ಪಕ್ಷ ಅವರಿಗೆ ಟಿಕೆಟ್ ನೀಡಿರಲಿಲ್ಲ. ಈ ಹಿನ್ನೆಲೆ ಅವರ ಪತ್ನಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ಕೆಜಿಎಫ್ ಬಾಬು ಕಣಕ್ಕೆ ಇಳಿಸಿದ್ದಾರೆ.

ಐಟಿ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಯಾರೆಲ್ಲ ನಮ್ಮೊಂದಿಗೆ ಇದ್ದಾರೆ ಅವರ ಮೇಲೆಲ್ಲಾ ಐಟಿ ದಾಳಿ ನಡೆಯುತ್ತಿದೆ. ಹೆದರಿಸಿ ಬೆದರಿಸಿ ಕಾಂಗ್ರೆಸ್ ಹೆಸರಿನ ಮೇಲೆ ಎಲ್ಲವೂ ಮಾಡುತ್ತಿದ್ದಾರೆ. ಕಾಂಗ್ರೆಸ್‌ನವರನ್ನು ಹೆದರಿಸೋಕೆ ಅವರು ಏನು ಬೇಕಾದರೂ ಮಾಡಲಿ. ಅವರು ಏನೇ ಮಾಡಿದರೂ ನಾವು ರಾಜ್ಯದಲ್ಲಿ ಬದಲಾವಣೆ ತರುತ್ತೇವೆ ಎಂದು ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com