ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ: ಶೇ.74.67 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಯಾದಗಿರಿಗೆ ಕೊನೇ ಸ್ಥಾನ

ಬಹು ನಿರೀಕ್ಷಿತ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ಫಲಿತಾಂಗಳು ಪ್ರಕಟವಾಗಿದ್ದು, ರಾಜ್ಯಾದ್ಯಂತ 5.24 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.
ಪಿಯುಸಿ ಫಲಿತಾಂಶ (ಸಂಗ್ರಹ ಚಿತ್ರ)
ಪಿಯುಸಿ ಫಲಿತಾಂಶ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಬಹು ನಿರೀಕ್ಷಿತ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ಫಲಿತಾಂಗಳು ಪ್ರಕಟವಾಗಿದ್ದು, ರಾಜ್ಯಾದ್ಯಂತ 5.24 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.

ಸಾಮಾನ್ಯ ವಿದ್ಯಾರ್ಥಿಗಳು, ಪುನರಾವರ್ತಿತರು ಮತ್ತು ಖಾಸಗಿ ಅಭ್ಯರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿ ಪ್ರಕಾರಗಳಿಗೆ ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕಾರಿಗಳು ಫಲಿತಾಂಶ ಪ್ರಕಟ ಮಾಡಿದ್ದು, ಪರೀಕ್ಷೆಯಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. 7,02,067 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಈ ಬಾರಿ 74.67% ಫಲಿತಾಂಶ ದಾಖಲಾಗಿದೆ. ದಕ್ಷಿಣ ಕನ್ನಡ ಮೊದಲ ಸ್ಥಾನ (95.33%) ಉಡುಪಿಗೆ ಎರಡನೇ ಸ್ಥಾನ( 95.24%) ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದರೆ ಯಾದಗಿರಿಗೆ (78.97%) ಕೊನೆಯ ಸ್ಥಾನ ಸಿಕ್ಕಿದೆ. ಎಂದಿನಂತೆ ಬಾಲಕೀಯರೇ ಮೇಲುಗೈ ಸಾಧಿಸಿದ್ದು 80.25% ಪಾಸ್ ಆಗಿದ್ದರೆ ಬಾಲಕರು 69.05% ಪಾಸ್‌ ಆಗಿದ್ದಾರೆ. ಗ್ರಾಮೀಣ ಭಾಗದ 74.79% ಮಕ್ಕಳು ತೇರ್ಗಡೆಯಾಗಿದ್ದರೆ 74.63% ನಗರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಪರೀಕ್ಷೆಗೆ 727,923 ವಿದ್ಯಾರ್ಥಿಗಳು ನೋಂದಾಯಿಸಿದ್ದು, ಈ ಪೈಕಿ 725,821 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹರಾಗಿದ್ದಾರೆ. 23,754 ಮಂದಿ ವಿದ್ಯಾರ್ಥಿಗಳು ಎಲ್ಲ ವಿಷಯಗಳ ಪರೀಕ್ಷೆಗೆ ಗೈರಾಗಿದ್ದಾರೆ. 702,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 524,209 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿದುಬಂದಿದೆ. 2023 ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,02,067 ವಿದ್ಯಾರ್ಥಿಗಳು ಹಾಜರಾಗಿದ್ದರು. ಒಟ್ಟು 61 ಕೇಂದ್ರದಲ್ಲಿ ಮೌಲ್ಯಮಾಪನ ಮಾಡಲಾಗಿತ್ತು.

ಕಲಾ ವಿಭಾಗದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ 1,34,876. ಕಲಾ ವಿಭಾಗದಲ್ಲಿ ಶೇಕಡಾ 61.22ರಷ್ಟು ಫಲಿತಾಂಶ ಬಂದಿದ್ದು,  ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು KSEEB ಯ ಅಧಿಕೃತ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.

ದಕ್ಷಿಣಕನ್ನಡ ಜಿಲ್ಲಗೆ ಪ್ರಥಮ ಸ್ಥಾನ, ಯಾದಗಿರಿ ಕೊನೆಯ ಸ್ಥಾನ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆಗೆ 2ನೇ ಸ್ಥಾನ ಲಭಿಸಿದೆ. ಕೊಡಗು 3, ಉತ್ತರ ಕನ್ನಡ 4, ಯಾದಗಿರಿ ಕೊನೆಯ ಸ್ಥಾನದಲ್ಲಿದೆ. 

ವಿದ್ಯಾರ್ಥಿಗಳು ಫಲಿತಾಂಶವನ್ನು 11 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ವಿದ್ಯಾರ್ಥಿಗಳು ತಮ್ಮ ಪೂರ್ವ ವಿಶ್ವವಿದ್ಯಾಲಯ ಪ್ರಮಾಣಪತ್ರ (PUC) ಪರೀಕ್ಷೆಯ ಫಲಿತಾಂಶಗಳನ್ನು ಬೆಳಿಗ್ಗೆ 11 ಗಂಟೆಗೆ ಆನ್ಲೈನ್ ಅಲ್ಲಿ ಪರಿಶೀಲಿಸಬಹುದು ಎಂದು ಪ್ರಕಟಿಸಿದೆ. ಫಲಿತಾಂಶಗಳು KSEEB ಯ ಅಧಿಕೃತ ವೆಬ್‌ಸೈಟ್‌ನಲ್ಲಿ (karresults.nic.in.) ಲಭ್ಯವಿರುತ್ತವೆ ಮತ್ತು ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಇತರ ಅಗತ್ಯ ವಿವರಗಳನ್ನು ಬಳಸಿಕೊಂಡು ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com