ಅಭ್ಯರ್ಥಿಗಳಿಗೆ ಬಿ-ಫಾರಂ ಕೊಡಲು ಹಣ ವಸೂಲಿ ಆರೋಪ: ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ಶೋಭಾ ಕರಂದ್ಲಾಜೆ ದೂರು

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಣ ವಸೂಲಿ ಮಾಡಿರುವ ಆರೋಪ ಕೇಳಿಬಂದಿದೆ.
ಶೋಭಾ ಕರಂದ್ಲಾಜೆ, ಡಿಕೆ ಶಿವಕುಮಾರ್
ಶೋಭಾ ಕರಂದ್ಲಾಜೆ, ಡಿಕೆ ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಣ ವಸೂಲಿ ಮಾಡಿರುವ ಆರೋಪ ಕೇಳಿಬಂದಿದೆ.

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಅಭ್ಯರ್ಥಿಗಳಿಗೆ ಬಿ-ಫಾರಂ ನೀಡುವುದರ ಜೊತೆಗೆ ಅವರಿಂದ ಹಣವನ್ನೂ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿ, ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಆಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಂದ ಕೆಪಿಸಿಸಿ ಹಣ ಸಂಗ್ರಹಿಸಿದೆ ಎಂದು ಡಿಕೆ ಶಿವಕುಮಾರ್ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಇದು ಚುನಾವಣಾ ಕಾನೂನುಗಳು ಮತ್ತು ಮಾದರಿ ನೀತಿ ಸಂಹಿತೆಯ ಗಂಭೀರ ಉಲ್ಲಂಘನೆ ಆಗಿದೆ ಎಂದು ಅವರು ದೂರಿನಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಲು ಪ್ರತಿ ಆಕಾಂಕ್ಷಿಗಳಿಂದ ಡಿಕೆ ಶಿವಕುಮಾರ್ ಹಣ ಸಂಗ್ರಹಿಸಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ಕುರಿತ ವರದಿಯನ್ನು ಬಿಜೆಪಿ ಟ್ವೀಟರ್ ನಲ್ಲಿ ಹಂಚಿಕೊಂಡಿದ್ದು, ರಾಜಕೀಯ ಎಂಬುದು ಜನಸೇವೆ, ಅದನ್ನು ಈಗ ಡಿಕೆ ಶಿವಕುಮಾರ್ ವ್ಯಾಪಾರ ಮಾಡಿಕೊಂಡಿದ್ದಾರೆ. ಹಣ ತೆಗೆದುಕೊಂಡು ಟಿಕೆಟ್ ನೀಡಿ, ನೀತಿ ಸಂಹಿತೆ ಉಲ್ಲಂಘಿಸಿದ ಬಗ್ಗೆ ಶೋಭಾ ಕರಂದ್ಲಾಜೆ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com