ಬೆಳಗಾವಿಯಲ್ಲೊಂದು ಹಿಟ್ ಅಂಡ್ ರನ್ ಪ್ರಕರಣ; ಇಬ್ಬರು ರೈತರು ಸಾವು, ಇಬ್ಬರಿಗೆ ಗಾಯ

ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಇಬ್ಬರು ರೈತರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಇಬ್ಬರು ರೈತರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು 65 ವರ್ಷದ ಮಹಾಬಲೇಶ್ವರ ಶಿಂಧೆ ಮತ್ತು 75 ವರ್ಷದ ಪುಂಡಲೀಕ ರೆಡೆಕರ ಎಂದು ಗುರುತಿಸಲಾಗಿದೆ. ಕ್ರಿಶನ್ ರೆಡೇಕರ (74) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಜುನಾಥ ಕಾಗಿನಕರ (47) ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಖಾನಾಪುರ ತಾಲೂಕಿನ ಗೋಧೂಳಿ ಗ್ರಾಮದ ಧಾರವಾಡ-ರಾಮನಗರ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರೈತರು ತಮ್ಮ ಜಮೀನಿನಲ್ಲಿ ಕಬ್ಬು ಬೆಳೆಗೆ ನೀರು ಬಿಡಲು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ವಾಹನ ಬಂದು ಡಿಕ್ಕಿ ಹೊಡೆದಿದೆ. ಘಟನೆ ನಂತರ ಚಾಲಕ ವಾಹನ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ.

ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಆಸ್ಪತ್ರೆಗೆ ಭೇಟಿ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕುಟುಂಬಸ್ಥರಿಗೆ ಭರವಸೆ ನೀಡಿದರು. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com