ಬೆಂಗಳೂರು: ಐವೈಸಿ ಅಧ್ಯಕ್ಷ ಬಿವಿ ಶ್ರೀನಿವಾಸ್ ಅಂಕಲ್ ನಿವಾಸಕ್ಕೆ ನೋಟಿಸ್ ಅಂಟಿಸಿದ ಅಸ್ಸಾಂ ಪೊಲೀಸರು!

ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ.ಶ್ರೀನಿವಾಸ್  ವಿರುದ್ಧ ಅಸ್ಸಾಂ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಅಂಗ್ಕಿತಾ ದತ್ತಾ ದಾಖಲಿಸಿರುವ ಕಿರುಕುಳ ಪ್ರಕರಣದ ತನಿಖೆ ನಡೆಸುತ್ತಿರುವ ಅಸ್ಸಾಂ ಪೊಲೀಸರ ತಂಡವೊಂದು ಬೆಂಗಳೂರಿಗೆ ಆಗಮಿಸಿದೆ.
ಅಸ್ಸಾಂ ಪೊಲೀಸರು
ಅಸ್ಸಾಂ ಪೊಲೀಸರು

ಬೆಂಗಳೂರು: ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ.ಶ್ರೀನಿವಾಸ್  ವಿರುದ್ಧ ಅಸ್ಸಾಂ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಅಂಗ್ಕಿತಾ ದತ್ತಾ ದಾಖಲಿಸಿರುವ ಕಿರುಕುಳ ಪ್ರಕರಣದ ತನಿಖೆ ನಡೆಸುತ್ತಿರುವ ಅಸ್ಸಾಂ ಪೊಲೀಸರ ತಂಡವೊಂದು 
ಬೆಂಗಳೂರಿಗೆ ಆಗಮಿಸಿತ್ತು.

ಬಸವೇಶ್ವರನಗರದಲ್ಲಿರುವ ಬಿ.ವಿ ಶ್ರೀನಿವಾಸ್ ಅವರ ಅಂಕಲ್ ನಿವಾಸಕ್ಕೆ ತೆರಳಿದ ಪೊಲೀಸರು, ನೋಟಿಸ್ ನ್ನು ಮನೆ ಮುಂಭಾಗ ಅಂಟಿಸಿ ತೆರಳಿದ್ದಾರೆ.

 ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಸ್ಸಾಂ ಜಂಟಿ ಪೊಲೀಸ್ ಆಯುಕ್ತ ಪ್ರತೀಕ್ ತುಬೆ, ಪ್ರಕರಣದ ತನಿಖೆಗಾಗಿ ಇಲ್ಲಿಗೆ ಬಂದಿದ್ದೇವೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ನೋಟಿಸ್ ಅಂಟಿಸಿದ್ದೇವೆ, ಅವರ ಸ್ವಗ್ರಾಮಕ್ಕೂ ನೋಟಿಸ್ ಕಳುಹಿಸುತ್ತಿದ್ದೇವೆ. ತನಿಖಾ ಅಧಿಕಾರಿಯ ಮುಂದೆ ಹಾಜರಾಗಲು ಹಾಗೂ ತನಿಖೆಯ ಪ್ರಕ್ರಿಯೆಯಲ್ಲಿ ಸಹಕರಿಸಲು ಶ್ರೀನಿವಾಸ್ ಅವರಿಗೆ ನೋಟಿಸ್ ನೀಡಿದ್ದೇವೆ ಎಂದು ತಿಳಿಸಿದರು.

ಬಿವಿ ಶ್ರೀನಿವಾಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಅಂಗ್ಕಿತಾ ದತ್ತಾ ಅವರನ್ನು ಆರು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com