ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಸಿದ್ದರಾಮಯ್ಯ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆ: ಸಿಎಂ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಡಿಎ, ಇಂಧನ ಹಾಗೂ ನೀರಾವರಿಯಲ್ಲಿ ಅಕ್ರಮ ಮಾಡಿ, ಇಡೀ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಆರೋಪಿಸಿದ್ದಾರೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಡಿಎ, ಇಂಧನ ಹಾಗೂ ನೀರಾವರಿಯಲ್ಲಿ ಅಕ್ರಮ ಮಾಡಿ, ಇಡೀ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಆರೋಪಿಸಿದ್ದಾರೆ.

ನಗರದ ಯಲಂಹಕದಲ್ಲಿ ಚುನಾವಣಾ ಪ್ರಚಾರ ಹಾಗೂ ರೋಡ್ ಶೋದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ 8 ಸಾವಿರ ಕೋಟಿ ರೂ. ಅಕ್ರಮ ಮಾಡಿದ್ದಾರೆ. ಬಿಡಿಎ, ಇಂಧನ ಹಾಗೂ ನೀರಾವರಿಯಲ್ಲಿ ಅಕ್ರಮ ಮಾಡಿದ್ದಾರೆಂದು ಆರೋಪಿಸಿದರು.

ಸಿದ್ದರಾಮಯ್ಯನವರ ಆಡಳಿತದಲ್ಲಿ ಶಿಕ್ಷಕರ ನೇಮಕಾತಿ, ಪ್ರಶ್ನೆಪತ್ರಿಕೆ ಸೋರಿಕೆ, ರೀಡೂ ಮುಂತಾದಂತಹ ಹಗರಣಗಳು ನಡೆದಿವೆ. . 843 ಎಕರೆ ಭೂಮಿಯನ್ನು ಅಕ್ರಮವಾಗಿ ಸಾಹುಕಾರರಿಗೆ ಬಿಟ್ಟುಕೊಟ್ಟು 8 ಸಾವಿರ ಕೋಟಿ ರೂ. ಹಗರಣವನ್ನು ಯಾರಾದರೂ ಮಾಡಿದ್ದರೆ ಅದು ಸಿದ್ದರಾಮಯ್ಯನವರ ಸರ್ಕಾರ ಎಂಬುದನ್ನು ಸ್ಪಷ್ಟವಾಗಿ ಹೇಳುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷದ ಕುರಿತು ಮಾತನಾಡಿ, ಕಾಂಗ್ರೆಸ್ ಎಂದರೆ ಅನ್ಯಾಯ, ಭ್ರಷ್ಟಾಚಾರ, ಅನೀತಿ, ಅಧರ್ಮ. ಈ ಅನಿಷ್ಟ ಕಾಂಗ್ರೆಸ್ ಪಕ್ಷವನ್ನು ಶಾಶ್ವತವಾಗಿ ಕರ್ನಾಟಕದ ಆಡಳಿತದಿಂದ ದೂರವಿಡಬೇಕಾಗಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕವನ್ನು ಮಾಡಬೇಕಾಗಿದೆ. ಕಾಂಗ್ರೆಸ್ ಎಂಬ ಹೆಸರನ್ನು ಶಾಶ್ವತವಾಗಿ ಈ ನೆಲದಿಂದ ಕಿತ್ತು ಹಾಕಬೇಕಾಗಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್‌ನವರು ಗ್ಯಾರಂಟಿ ಕಾರ್ಡ್ ಅನ್ನು ಕೊಟ್ಟಿದ್ದಾರೆ. ಅದಕ್ಕೆ ಯಾವುದೇ ಜೀವ ಇಲ್ಲ. ಅದನ್ನು ತೆಗೆದುಕೊಂಡು ಉಪ್ಪಿನಕಾಯಿ ಹಾಕಬೇಕು ಅಷ್ಟೇ ಬಿಟ್ಟರೆ, ಅದರಿಂದ ಬೇರೆ ಯಾವುದೇ ಉಪಯೋಗವಿಲ್ಲ. ಚುನಾವಣೆ ಮುಗಿಯುವವರೆಗೂ ಅದು ಗ್ಯಾರಂಟಿ, ಚುನಾವಣೆ ಮುಗಿದ ನಂತರ ಅದು ಗಳಗಂಟಿ ಎಂದು ವ್ಯಂಗ್ಯವಾಡಿದರು.

ಇದೇ ವೇಳೆ ಸಿದ್ದರಾಮಯ್ಯ ಅವರ ಲಿಂಗಾಯತರ ಕುರಿತ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಮಾಜಿ ಸಿಎಂ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಇಡೀ ಲಿಂಗಾಯತ ಸಮುದಾಯವೇ ಭ್ರಷ್ಟವಾಗಿದೆ ಎಂದು ಹೇಳಿರುವ ಅವರು, ಈ ಹಿಂದೆ ಬ್ರಾಹ್ಮಣ ಸಮುದಾಯವನ್ನು ಅಪಹಾಸ್ಯ ಮಾಡಿದ್ದರು. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಲಿಂಗಾಯತ-ವೀರಶೈವ ಸಮಾಜ ಒಡೆಯಲು ಯತ್ನಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ ಜನತೆ ಸಿದ್ದರಾಮಯ್ಯ ಅವರಿಗೆ ತಕ್ಕ ಪಾಠ ಕಲಿಸುತ್ತಾರೆಂದು ಹೇಳಿದರು.

Related Stories

No stories found.

Advertisement

X
Kannada Prabha
www.kannadaprabha.com