ಹುಬ್ಬಳ್ಳಿಗೆ ಆಗಮಿಸಿದ ರಾಹುಲ್ ಗಾಂಧಿ: ಅದ್ಧೂರಿ ಸ್ವಾಗತ ಕೋರಿದ ಕೈ ನಾಯಕರು, ಶೆಟ್ಟರ್ ಜೊತೆ ರಾಗಾ ಮಾತುಕತೆ

ಹುಬ್ಬಳ್ಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಭೇಟಿ ನೀಡಿದ್ದು, ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು.
ರಾಹುಲ್ ಗಾಂಧಿ ಸ್ವಾಗತಿಸಿದ ಜಗದೀಶ್ ಶೆಟ್ಟರ್
ರಾಹುಲ್ ಗಾಂಧಿ ಸ್ವಾಗತಿಸಿದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಹುಬ್ಬಳ್ಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಭೇಟಿ ನೀಡಿದ್ದು, ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು.

ಈ ವೇಳೆ ಶಾಸಕ ಪ್ರಸಾದ್ ಅಬ್ಬಯ್ಯ, ಜಿಲ್ಲಾ‌ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಸೇರಿ ಹಲವು ಕಾಂಗ್ರೆಸ್​ ನಾಯಕರು ಸ್ವಾಗತಿಸಿದರು.

ಬಳಿಕ ಜಗದೀಶ್​ ಶೆಟ್ಟರ್​ ಜೊತೆ ರಾಹುಲ್​ ಗಾಂಧಿ ಕೆಲಕಾಲ ಮಾತುಕತೆ ನಡೆಸಿದರು. ರಾಹುಲ್ ಗಾಂಧಿ ಅವರು  ನೇರವಾಗಿ ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮಕ್ಕೆ ತೆರಳಿದರು.

ದೇವಾಲಯ ಭೇಟಿ ಬಳಿಕ ರಾಹುಲ್ ಗಾಂಧಿಯವರು ಮಧ್ಯಾಹ್ನ ಬಸವ ಮಂಟಪದಲ್ಲಿ ಉತ್ಸವ ಸಮಿತಿಯಿಂದ ಏರ್ಪಡಿಸಿರುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಕೂಡಲ ಸಂಗಮದ ದಾಸೋಹ ಭವನದಲ್ಲಿ ಪ್ರವಾಸ ಸ್ವೀಕರಿಸಲಿದ್ದಾರೆ. ಬಳಿಕ ವಿಜಯಪುರಕ್ಕೆ ಪ್ರಯಾಣ ಬೆಳೆಸಲಿರುವ ಅವರು ಅಧಿಕೃತ ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಇಂದು ಸಂಜೆ ವಿಜಯಪುರ ಶಿವಾಜಿ ವೃತ್ತದಿಂದ ಕನಕದಾಸ ವೃತ್ತದವರೆಗೆ ಜನಸಂಪರ್ಕ ಹೆಸರಿನಲ್ಲಿ ಅದ್ಧೂರಿ ರ್ಯಾಲಿ ನಡೆಸಲಿದ್ದಾರೆ. ಬಳಿಕ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಏಪ್ರಿಲ್ 24 ರಂದು ಸೋಮವಾರ ಮಧ್ಯಾಹ್ನ 2 ಗಂಟೆಗೆ ಬೆಳಗಾವಿಯ ರಾಮದುರ್ಗದಲ್ಲಿ ಕಬ್ಬು ಬೆಳೆಗಾರರೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 3.30ಕ್ಕೆ ಗದಗದಲ್ಲಿ ಯುವ ಸಂವಾದದಲ್ಲಿ ಭಾಗವಹಿಸಿ ಯುವಕರೊಂದಿಗೆ ಸಂವಾದದಲ್ಲಿ ತೊಡಗಲಿದ್ದಾರೆ.

ಸಂಜೆ 5 ಗಂಟೆಗೆ ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆಯಲಿರುವ ಬೃಹತ್ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಹುಬ್ಬಳ್ಳಿ ಮೂಲಕ ದೆಹಲಿಗೆ ವಾಪಸ್ಸಾಗಲಿದ್ದಾರೆ.

ಈ ಮೂಲಕ ಎರಡು ದಿನಗಳಲ್ಲಿ ಹಾವೇರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ ಸೇರಿದಂತೆ ಐದು ಜಿಲ್ಲೆಗಳಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com