ಏಪ್ರಿಲ್ 25 ರಿಂದ ಪ್ರಿಯಾಂಕಾ ಗಾಂಧಿ ವಾದ್ರಾ ರಾಜ್ಯ ಪ್ರವಾಸ, ಮೈಸೂರು-ಚಾಮರಾಜನಗರದಲ್ಲಿ ಚುನಾವಣಾ ಪ್ರಚಾರ
ರಾಜ್ಯದಾದ್ಯಂತ ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಎಲ್ಲಾ ಪಕ್ಷಗಳು ಬಿರುಸಿನಿಂದ ಪ್ರಚಾರ ಕಾರ್ಯ ನಡೆಸುತ್ತಿವೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕದಲ್ಲಿ ಒಬ್ಬರಾದ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
Published: 24th April 2023 12:17 PM | Last Updated: 24th April 2023 07:04 PM | A+A A-

ಪ್ರಿಯಾಂಕಾ ಗಾಂಧಿ ವಾದ್ರಾ
ಮೈಸೂರು: ರಾಜ್ಯದಾದ್ಯಂತ ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಎಲ್ಲಾ ಪಕ್ಷಗಳು ಬಿರುಸಿನಿಂದ ಪ್ರಚಾರ ಕಾರ್ಯ ನಡೆಸುತ್ತಿವೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕದಲ್ಲಿ ಒಬ್ಬರಾದ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಪ್ರಿಯಾಂಕಾ ಅವರು ಏಪ್ರಿಲ್ 25 ಮತ್ತು 26 ರಂದು ಕರ್ನಾಟಕದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ಸುದ್ದಿ ಸಂಸ್ಥೆ ಎನ್ಎನ್ಐ ವರದಿ ಮಾಡಿದೆ.
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಮತದಾನವು ಮೇ 10 ರಂದು ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಂಗಳವಾರ ಮೈಸೂರು ಮತ್ತು ಚಾಮರಾಜನಗರದಲ್ಲಿ ಪ್ರವಾಸ ಮಾಡಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ಇದನ್ನೂ ಓದಿ: ಇಂದಿನ ಸಮಾಜದಲ್ಲಿ ಸತ್ಯ ಹೇಳುವುದು ಬಹಳ ಕಷ್ಟವಾಗಿದ್ದು, ಅಂತಹವರಿಗೆ ಭಯ ಹುಟ್ಟಿಸಲಾಗುತ್ತಿದೆ: ರಾಹುಲ್ ಗಾಂಧಿ
ಮಂಗಳವಾರ ಮಧ್ಯಾಹ್ನ 12 ರಿಂದ 1 ಗಂಟೆಯೊಳಗೆ ಟಿ.ನರಸೀಪುರದ ಹೆಳವರಹುಂಡಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಯಿಂದ ಚಾಮರಾಜನಗರ ಜಿಲ್ಲೆಯ ಹನೂರಿನ ಗೌರಿಶಂಕರ್ ಕನ್ವೆನ್ಷನ್ ಹಾಲ್‌ನಲ್ಲಿ ಮಹಿಳಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ಮೈಸೂರಿನ ಕೆ.ಆರ್. ನಗರಕ್ಕೆ ಬರಲಿದ್ದಾರೆ ಮತ್ತು ಸಂಜೆ 5.30 ರಿಂದ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಬಿಜೆ ವಿಜಯಕುಮಾರ್ ತಿಳಿಸಿದ್ದಾರೆ.
ರಾಜ್ಯದಾದ್ಯಂತ ಈಗಾಗಲೇ ಕಾಂಗ್ರೆಸ್ ಭರ್ಜರಿ ಪ್ರಚಾರ ಆರಂಭಿಸಿದ್ದು, ಈ ಭಾರಿ ಗದ್ದುಗೆ ಏರುವ ಕನಸು ಕಾಣುತ್ತಿದೆ. ಇನ್ನೊಂದೆಡೆ, ರಾಜ್ಯದಲ್ಲಿ ನಿರ್ಣಾಯಕ ಪಾತ್ರವಹಿಸುವ ಲಿಂಗಾಯತ ಮತಬ್ಯಾಂಕ್ ಮೇಲೆ ಕಣ್ಣಿಟ್ಟಿರುವ ಪಕ್ಷವು ಶತಾಯಗತಾಯ ಸಮುದಾಯವನ್ನು ಓಲೈಸುವಲ್ಲಿ ತೊಡಗಿದೆ. ನಿನ್ನೆಯಷ್ಟೇ, ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿ ಬಾಗಲಕೋಟೆಯಲ್ಲಿ ಬಸವ ಜಯಂತಿ ಪಾಲ್ಗೊಂಡಿದ್ದರು. ಬಳಿಕ ವಿಜಯಪುರದಲ್ಲಿ ನಡೆದ ರೋಡ್‌ಶೋನಲ್ಲಿ ಭಾಗವಹಿಸಿದ್ದರು.