ಹುಬ್ಬಳ್ಳಿ: ಖಾಸಗಿ ರಿಯಲ್ ಎಸ್ಟೇಟ್ ಡೆವಲಪರ್ ನಿವಾಸ-ಕಚೇರಿ ಮೇಲೆ ಐಟಿ ದಾಳಿ
ನಿನ್ನೆ ಸೋಮವಾರವಷ್ಟೇ ಲೋಕಾಯುಕ್ತ ಪೊಲೀಸರು ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ ವೇಳೆ ಸಿಕ್ಕಿದ ಅಪಾರ ಪ್ರಮಾಣದ ನಗದು, ಚಿನ್ನಾಭರಣಗಳು ಅಧಿಕಾರಿಗಳನ್ನು ದಂಗುಬಡಿಸಿತ್ತು.
Published: 25th April 2023 09:50 AM | Last Updated: 25th April 2023 09:50 AM | A+A A-

ಹುಬ್ಬಳ್ಳಿಯ ರಿಯಲ್ ಎಸ್ಟೇಟ್ ಡೆವಲಪರ್ ನಿವಾಸ
ಬೆಂಗಳೂರು: ನಿನ್ನೆ ಸೋಮವಾರವಷ್ಟೇ ಲೋಕಾಯುಕ್ತ ಪೊಲೀಸರು ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ ವೇಳೆ ಸಿಕ್ಕಿದ ಅಪಾರ ಪ್ರಮಾಣದ ನಗದು, ಚಿನ್ನಾಭರಣಗಳು ಅಧಿಕಾರಿಗಳನ್ನು ದಂಗುಬಡಿಸಿತ್ತು.
ಅಷ್ಟೇ ಅಲ್ಲದೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿತ್ತು. ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಖಾಸಗಿ ರಿಯಲ್ ಎಸ್ಟೇಟ್ ಡೆವಲಪರ್ ಅಂಕಿತಾ ಬಿಲ್ಡರ್ಸ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇನ್ನು ಬಿಲ್ಡರ್ ಅರವಿಂದ್ ಕುಲಬರಗಿ ಅವರ ನಿವಾಸ ಮತ್ತು ಕಚೇರಿ ಮೇಲೆ ಸಹ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.