ಸುಪ್ರೀಂ ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ನಿರ್ಧಾರವಿಲ್ಲ: ಸಿಎಂ ಬೊಮ್ಮಾಯಿ

ತೀವ್ರ ಚರ್ಚೆಗೆ ಗ್ರಾಸವಾಗಿರುವ ರಾಜ್ಯ ಸೃರ್ಕಾರದ ಒಳ ಮೀಸಲಾತಿ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸುಪ್ರೀಂ ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ತೀವ್ರ ಚರ್ಚೆಗೆ ಗ್ರಾಸವಾಗಿರುವ ರಾಜ್ಯ ಸೃರ್ಕಾರದ ಒಳ ಮೀಸಲಾತಿ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸುಪ್ರೀಂ ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಧಾರವಾಡದ ಉಪ್ಪಿನಬೆಟಗೇರಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿದರು. 'ಮುಸ್ಲಿಮರ ಮೀಸಲಾತಿ ಕುರಿತು ಈಗಾಗಲೇ ಸರ್ವೋಚ್ಚ ನ್ಯಾಯಾಲಯದ ಪ್ರಕರಣದ ವಿಚಾರಣೆ ಪೂರ್ಣವಾಗುವವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಈಗಾಗಲೇ ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯವು ಮೇ 9 ಕ್ಕೆ ದಿನಾಂಕ ಮುಂದೂಡಿದ್ದು, ಕೋರ್ಟ್‌ ನಿಂದ ಯಾವುದೇ ತಡೆಯಾಜ್ಞೆ ಸಿಕ್ಕಿಲ್ಲ' ಎಂದರು.

ಅಂತೆಯೇ ಮುಸ್ಲಿಂ ವಿರುದ್ಧವಾಗಿ ಈ ಮೀಸಲಾತಿ ಹಂಚಿಕೆ ಇಲ್ಲ. ಈ ಬಗ್ಗೆ ಕಾಂಗ್ರೆಸ್ ಸುಳ್ಳು ಹೇಳುತ್ತಿದೆ. ಮುಸ್ಲಿಮರಲ್ಲಿ ಸುಮಾರು 17 ಉಪಜಾತಿಗಾಳಿವೆ. ಅವೆಲ್ಲವೂ ಹಿಂದುಳಿದ ವರ್ಗದಲ್ಲಿಯೇ ಇವೆ. ಇಲ್ಲಿಯೂ ಕಡಿಮೆ ಆದಾಯಕ್ಕೆ ಮೀಸಲಾತಿ ಸಿಗುತ್ತಿತ್ತು. ನಾವು ಈಗ ಮಾಡಿದ ಮೀಸಲಾತಿಯಲ್ಲಿಯೂ ಅದೇ ಸಿಗುತ್ತದೆ. ಹೀಗಾಗಿ ಅನ್ಯಾಯ ಆಗಿಲ್ಲ ಮತ್ತು ಮಾನದಂಡಗಳೂ ಬದಲಾಗಿಲ್ಲ. ಹೀಗಾಗಿ ಇದರಲ್ಲಿ ಅನ್ಯಾಯದ ಮಾತೇ ಇಲ್ಲ. ಸುಪ್ರೀಂ ಕೋರ್ಟ್ ವಿಚಾರಣೆ ಪೂರ್ಣಗೊಳ್ಳುವವರೆಗೆ ನಾವು ಅದನ್ನು ಮುಂದಕ್ಕೆ ತೆಗೆದುಕೊಳ್ಳುವುದಿಲ್ಲ ಎಂದು ನಾವು ನಿರ್ಧರಿಸಿದ್ದೇವೆ ಅಂತೆಯೇ ನ್ಯಾಯಾಲಯವು ಯಾವುದೇ ತಡೆಯಾಜ್ಞೆ ನೀಡಿಲ್ಲ ಎಂದೂ ಅವರು ಸ್ಪಷ್ಟಪಡಿಸಿದರು.

ಅಲ್ಲದೆ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಮೇ 9 ಕ್ಕೆ ಮುಂದೂಡಿದ್ದು, ಕೋರ್ಟ್‌ ನಿಂದ ಯಾವುದೇ ತಡೆಯಾಜ್ಞೆ ಸಿಕ್ಕಿಲ್ಲ ಎಂದರು. 

ಕಾಂಗ್ರೆಸ್ ಸುಳ್ಳು ಹೇಳುತ್ತಿದೆ
ಮುಸ್ಲಿಂ ವಿರುದ್ಧವಾಗಿ ಈ ಮೀಸಲಾತಿ ಹಂಚಿಕೆ ಆಗಿಲ್ಲ ಎಂದು ಕಾಂಗ್ರೆಸ್ ಸುಳ್ಳು ಹೇಳುತ್ತಿದೆ. ಮುಸ್ಲಿಮರಲ್ಲಿ ಸುಮಾರು 17 ಉಪಜಾತಿಗಾಳಿವೆ. ಅವೆಲ್ಲವೂ ಹಿಂದುಳಿದ ವರ್ಗದಲ್ಲಿಯೇ ಇವೆ. ಅಲ್ಲಿಯೂ ಕಡಿಮೆ ಆದಾಯಕ್ಕೆ ಮೀಸಲಾತಿ ಸಿಗುತ್ತಿತ್ತು. ನಾವು ಈಗ ಮಾಡಿದ ಮೀಸಲಾತಿಯಲ್ಲಿಯೂ ಅದೇ ಸಿಗುತ್ತದೆ. ಹೀಗಾಗಿ ಅನ್ಯಾಯ ಆಗಿಲ್ಲ. ಜತೆಗೆ ಮಾನದಂಡಗಳೂ ಬದಲಾಗಿಲ್ಲ' ಎಂದರು.

10ರಷ್ಟು ಮೀಸಲಾತಿಗೆ ಅರ್ಹರಾಗಿರುವ ಆರ್ಥಿಕವಾಗಿ ದುರ್ಬಲ ವರ್ಗದಲ್ಲಿ ಮುಸ್ಲಿಮರನ್ನು ಇರಿಸಲಾಗಿದೆ. ನಾಲ್ಕು ಪರ್ಸೆಂಟ್ ಪಡೆಯುತ್ತಿದ್ದವರನ್ನು 10 ಪರ್ಸೆಂಟ್ ಕೆಟಗರಿಗೆ ಹಾಕಲಾಗಿದೆ. ಇದರಿಂದ ಯಾವುದೇ ಅನ್ಯಾಯ ಆಗಿಲ್ಲ ಎಂದರು.

ಇದೇ ವೇಳೆ ಮಾತನಾಡಿದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು, ಭಾರತದ ಸಂವಿಧಾನವು ಧರ್ಮ ಆಧಾರಿತ ಮೀಸಲಾತಿಯನ್ನು ಅನುಮತಿಸುವುದಿಲ್ಲ. ಹಿಂದಿನ ಸರ್ಕಾರ ತನ್ನ ತುಷ್ಟೀಕರಣ ರಾಜಕಾರಣದ ಭಾಗವಾಗಿ ಇದನ್ನು ಜಾರಿಗೆ ತಂದಿತ್ತು ಎಂದು ಹೇಳಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com