ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಕಿಚ್ಚನ ಅಬ್ಬರದ ಪ್ರಚಾರ: ಚುನಾವಣೆವರೆಗೂ ಪಕ್ಷದ ಜೊತೆಯಲ್ಲಿರುವೆ ಎಂದ ನಟ ಸುದೀಪ್
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರವನ್ನು ನಡೆಸುತ್ತಿವೆ. ಮತದಾರರ ಸೆಳೆಯರು ರಾಜಕೀಯ ಪಕ್ಷಗಳು ಸಿನಿ ಸ್ಟಾರ್ ಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅದರಂತೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ನಟ ಕಿಚ್ಚ ಸುದೀಪ್ ಅವರು ಪ್ರಚಾರ ನಡೆಸುತ್ತಿದ್ದಾರೆ.
Published: 26th April 2023 12:57 PM | Last Updated: 26th April 2023 07:01 PM | A+A A-

ಪ್ರಚಾರದಲ್ಲಿ ತೊಡಗಿರುವ ನಟ ಸುದೀಪ್.
ಚಿತ್ರದುರ್ಗ: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರವನ್ನು ನಡೆಸುತ್ತಿವೆ. ಮತದಾರರ ಸೆಳೆಯರು ರಾಜಕೀಯ ಪಕ್ಷಗಳು ಸಿನಿ ಸ್ಟಾರ್ ಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅದರಂತೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ನಟ ಕಿಚ್ಚ ಸುದೀಪ್ ಅವರು ಪ್ರಚಾರ ನಡೆಸುತ್ತಿದ್ದಾರೆ.
ಮೊಳಕಾಲ್ಮೂರಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸುದೀಪ್ ಅವರು, ನಗರದ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ಪರವಾಗಿ ಮತಯಾಚನೆ ಮಾಡಿದರು.
ಈ ವೇಳೆ ಸುದೀಪ್ ನೋಡಲು ಸಾವಿರಾರು ಜನರು ರಸ್ತೆಗಳಲ್ಲಿ ಕಿಕ್ಕಿರಿದು ನೆರೆದಿದ್ದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ಅವರನ್ನು ಬೆಂಬಲಿಸಿ ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆಯೂ ನಟ ಸುದೀಪ್ ಅವರು ಮನವಿ ಮಾಡಿಕೊಂಡರು.
ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸುದೀಪ್ ಅವರು, ಮಾತು ಕೊಟ್ಟಿದ್ದೇನೆ, ಚುನಾವಣೆ ಪ್ರಚಾರ ಕಾರ್ಯ ಮುಗಿಯುವವರೆಗೂ ಬಿಜೆಪಿ ಜೊತೆಯಲ್ಲಿ ಇರುತ್ತೇನೆಂದು ಹೇಳಿದರು.
#WATCH | Kannada actor Kiccha Sudeep campaigns for Bharatiya Janata Party candidate from Molakalmuru Assembly constituency, S Thippeswamy, in Chitradurga#KarnatakaElections pic.twitter.com/CL7I4mY0UG
— ANI (@ANI) April 26, 2023
ಹೋದ ಕಡೆಯಲ್ಲೆಲ್ಲಾ ಜನ ತುಂಬಾ ಪ್ರೀತಿ ತೋರಿಸುತ್ತಿದ್ದಾರೆ, ಪ್ರಚಾರಕ್ಕೆ ಹೋಗುವುದರಲ್ಲಿ ನನ್ನ ಸ್ವಾರ್ಥ ಕೂಡ ಇದೆ, ಈ ನೆಪದಲ್ಲಿ ಅಭಿಮಾನಿಗಳನ್ನು ಭೇಟಿ ಮಾಡಬಹುದು ಎಂದು ತಿಳಿಸಿದರು.
ಇದನ್ನೂ ಓದಿ: ಶಿಗ್ಗಾಂವಿಯಲ್ಲಿ ಬೊಮ್ಮಾಯಿ ನಾಮಪತ್ರ ಸಲ್ಲಿಕೆ; ಜೆಪಿ ನಡ್ಡಾ, ನಟ ಸುದೀಪ್ ಭಾಗಿ: ಬಿಜೆಪಿಗೆ 125ಕ್ಕೂ ಹೆಚ್ಚು ಸ್ಥಾನ ಎಂದ ಸಿಎಂ
ನಾನು ರೋಡ್ ಶೋಗಳಲ್ಲಿ ಭಾಗವಹಿಸಿ ತುಂಬಾ ವರ್ಷಗಳಾಗಿದೆ, ಹೆಬ್ಬುಲಿ ಚಲನಚಿತ್ರ ಬಿಡುಗಡೆ ಸಂದರ್ಭದಲ್ಲಿ ರೋಡ್ ಶೋ ಮಾಡಿದ್ದು ಕೊನೆಯಾಗಿತ್ತು, ಇಂದಿನಿಂದ ಸಂಪೂರ್ಣವಾಗಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತೇನೆ. ಬಿಸಿಲು ಜಾಸ್ತಿ ಇರುತ್ತೆ ಎಂದು ಮಧ್ಯಾಹ್ನ ರೋಡ್ ಶೋ ಆಯೋಜನೆ ಮಾಡಿರಲಿಲ್ಲ, ಆದರೂ ನಾನು ರೋಡ್ ಶೋ ಮಾಡಲು ಪ್ರಯತ್ನಿಸುತ್ತೇನೆ. ಎಲ್ಲಾ ಕಡೆ ಸ್ನೇಹಿತರು ಇದ್ದಾರೆ, ಚುನಾವಣಾ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ ಎಂದು ಹೇಳಿದರು.
ಸುದೀಪ್ ಅವರು ಇಂದು ಒಟ್ಟು 6 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದಾರೆ. ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಸುದೀಪ್ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ.