ಸಮಗ್ರ ಗರ್ಭಪಾತ ಆರೈಕೆ: ರಾಜ್ಯಕ್ಕೆ 2ನೇ ಸ್ಥಾನ

‘ಸಮಗ್ರ ಗರ್ಭಪಾತ ಆರೈಕೆ’ (ಸಿಎಸಿ) ಕಾರ್ಯಕ್ರಮ ಅನುಷ್ಠಾನದಲ್ಲಿ ಕರ್ನಾಟಕವು ದೇಶದಲ್ಲಿ ಎರಡನೇ ಅತ್ಯುತ್ತಮ ರಾಜ್ಯ ಎಂಬ ಗೌರವಕ್ಕೆ ಭಾಜನವಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ‘ಸಮಗ್ರ ಗರ್ಭಪಾತ ಆರೈಕೆ’ (ಸಿಎಸಿ) ಕಾರ್ಯಕ್ರಮ ಅನುಷ್ಠಾನದಲ್ಲಿ ಕರ್ನಾಟಕವು ದೇಶದಲ್ಲಿ ಎರಡನೇ ಅತ್ಯುತ್ತಮ ರಾಜ್ಯ ಎಂಬ ಗೌರವಕ್ಕೆ ಭಾಜನವಾಗಿದೆ.

ಏಪ್ರಿಲ್ 24 ಮತ್ತು 25 ರಂದು ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಸಮಗ್ರ ಗರ್ಭಪಾತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯ ಆರೋಗ್ಯ ಇಲಾಖೆಗೆ ಪ್ರಶಸ್ತಿ ಪ್ರದಾನ ಮಾಡಿತು.

ಈ ಕಾರ್ಯಕ್ರಮದಲ್ಲಿ ಗರ್ಭಪಾತದ ಆರೈಕೆ ಸುಧಾರಿಸುವ ಸವಾಲುಗಳು ಹಾಗೂ ಆರೈಕೆಯ ಬಗ್ಗೆ ಚರ್ಚಿಸಲಾಯಿತು.

ಅಸುರಕ್ಷಿತ ಗರ್ಭಪಾತವು ತಾಯಿಯ ಮರಣಕ್ಕೆ ಕಾರಣವಾಗಲಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಸುರಕ್ಷಿತ ಗರ್ಭಪಾತ ಸೇವೆಗಳನ್ನು ಒದಗಿಸಲು ಕ್ರಮವಹಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಸಿಎಸಿ ಕಾರ್ಯಕ್ರಮವು  ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತ ಆರೈಕೆಯ ಕಡೆಗೆ ಬಲವಾದ ಬದ್ಧತೆಯನ್ನು ಬೆಳೆಸುವ ಗುರಿಯನ್ನು ಹೊಂದಿದೆ ಎಂದು ಆರೋಗ್ಯಾಧಿಕಾರಿಯೊಬ್ಬರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com