ಬೆಂಗಳೂರಿನಲ್ಲಿಂದು ಮೋದಿ: ಮಾಗಡಿ ರಸ್ತೆಯ ನೈಸ್ ಜಂಕ್ಷನ್ ನಿಂದ ಸುಮನಹಳ್ಳಿವರೆಗೆ ರೋಡ್ ಶೋ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಂಗಳೂರಿಗೆ ಆಗಮಿಸುತ್ತಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ಕಾರಣಕ್ಕಾಗಿ ಹಲವು ಪ್ರದೇಶಗಳಲ್ಲಿ ರಸ್ತೆ ಸಂಚಾರಕ್ಕೆ ಪೊಲೀಸರು ನಿರ್ಬಂಧ ಹೇರಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಂಗಳೂರಿಗೆ ಆಗಮಿಸುತ್ತಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ಕಾರಣಕ್ಕಾಗಿ ಹಲವು ಪ್ರದೇಶಗಳಲ್ಲಿ ರಸ್ತೆ ಸಂಚಾರಕ್ಕೆ ಪೊಲೀಸರು ನಿರ್ಬಂಧ ಹೇರಿದ್ದಾರೆ.

ನಗರದ ಮಾಗಡಿ ರಸ್ತೆಯ ನೈಸ್ ರೋಡ್ ಜಂಕ್ಷನ್ ನಿಂದ ಸುಮನಹಳ್ಳಿ ಜಂಕ್ಷನ್ ವರೆಗ (5.3 ಕಿ.ಮೀ) ಪ್ರಧಾನಮಂತ್ರಿಗಳು ಇಂದು ಸಂಜೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ. ಈ ವೇಳೆ ರಸ್ತೆಯ ಎರಡೂ ಬದಿಯಲ್ಲಿ ಅಸಂಖ್ಯಾತ ಜನರನ್ನು ಒಗ್ಗೂಡಿಸಿ ಮೋದಿಯವರ ರೋಡ್ ಶೋ ಯಶಸ್ವಿಗೊಳಿಸಲು ಬಿಜೆಪಿ ನಿರ್ಧರಿಸಿದೆ.

ಈ ರೋಡ್ ಶೋ ಯಶವಂತಪುರ, ರಾಜರಾಜೇಶ್ವರಿನಗರ, ದಾಸರಹಳ್ಳಿ, ಮಹಾಲಕ್ಷ್ಮೀ ಲೇ ಔಟ್, ಗೋವಿಂದರಾಜ ನಗರ, ರಾಜಾಜಿನಗರ ಹಾಗೂ ವಿಜಯನಗರ ಕ್ಷೇತ್ರಗಳ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಪ್ರಧಾನಮಂತ್ರಿಗಳ ರೋಡ್ ಶೋಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ವಿರೋಧಿಗಳ ಎದೆಯಲ್ಲಿ ನಡುಕ ಹುಟ್ಟಿಸಲು ಆ ಕ್ಷೇತ್ರಗಳ ಹುರಿಯಾಳುಗಳು ಅಣಿಯಾಗಿದ್ದಾರೆ. ಅಲ್ಲದೆ, ಈ 7 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳನ್ನ ರಾಜ್ಯ ಸರ್ಕಾರದ ಹಾಲಿ ಮೂವರು ವಲಸೆ ಸಚಿವರು ಪ್ರತಿನಿಧಿಸುತ್ತಿದ್ದಾರೆ.

ಮೋದಿಯವರ ರೋಡ್ ಶೋ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಸುಮಾರು 3 ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ರೋಡ್ ಶೋ ಬಂದೋಬಸ್ತ್ ನಲ್ಲಿ ಇಬ್ಬರು ಹೆಚ್ಚುವರಿ ಆಯುಕ್ತರು, 6 ಡಿಸಿಪಿ, 18 ಎಸಿಪಿ, 120 ಇನ್ಸ್ ಪೆಕ್ಟರ್, 250 ಸಬ್ ಇನ್ಸ್ ಪೆಕ್ಟರ್, 2600 ಪೊಲೀಸರು ಹಾಗೂ ರಾಜ್ಯ ಮತ್ತು ಕೇಂದ್ರ ಭದ್ರತಾ ಪಡೆಗಳ ತುಕಡಿಗಳು ಪಾಲ್ಗೊಳ್ಳಲಿವೆ. ರಸ್ತೆಯ ಉದ್ದಗಲಕ್ಕೂ ಪ್ರತಿ 5 ಮೀಟರ್'ಗೆ ಒಬ್ಬರಂತೆ ಖಾಕಿಧಾರಿ ಇರಲಿದ್ದಾರೆ.

ಸಂಚಾರ ಬದಲಾವಣೆ

  • ಮೋದಿ ರೋಡ್ ಶೋ ಹಿನ್ನೆಲೆಯಲ್ಲಿ ನಗರದ ಕೆಲವು ಕಡೆ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
  • ಹಳೆ ವಿಮಾನ ನಿಲ್ದಾಣ ರಸ್ತೆ, ಕೇಂಬ್ರಿಡ್ಜ್‌ ಲೇಔಟ್‌ ರಸ್ತೆ, ಕಬ್ಬನ್‌ ರಸ್ತೆ, ಡಿಕನ್ಸನ್‌ ರಸ್ತೆ, ಅಂಬೇಡ್ಕರ್‌ ರಸ್ತೆ, ಕೆ.ಆರ್‌.ಸರ್ಕಲ್‌, ನೃಪತುಂಗ ರಸ್ತೆ, ಲಾಲ್‌ಬಾಗ್‌ ಪಶ್ಚಿಮ ದ್ವಾರ ರಸ್ತೆ, ಲಾಲ್‌ಬಾಗ್‌ ಮುಖ್ಯ ರಸ್ತೆ, ಬಸವನಗುಡಿ 50 ಅಡಿ ಕೆನರಾ ಬ್ಯಾಂಕ್‌ ರಸ್ತೆ, ಕೃಂಬಿಗಲ್‌ ರಸ್ತೆ, ಆರ್‌.ವಿ.ಕಾಲೇಜು ರಸ್ತೆ, ದೇವಾಂಗ ರಸ್ತೆಯಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 7.30ರವರೆಗೆ ಎಲ್ಲ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಈ ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
  • ಮಾಗಡಿ ಕಡೆಯಿಂದ ನಗರದ ಕಡೆಗೆ ಬರುವ ವಾಹನಗಳು ತಾವರೆಕೆರೆ ಜಂಕ್ಷನ್‌ನಲ್ಲಿಬಲ ತಿರುವು ಪಡೆದು ಹೆಮ್ಮಿಗೆಪುರ, ಕೊಮ್ಮಘಟ್ಟ, ಕೆಂಗೇರಿ ಮೂಲಕ ಮೈಸೂರು ರಸ್ತೆಗೆ ಹೋಗಬಹುದು.
  • ಮಾಗಡಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ತಾವರೆಕೆರೆ ಜಂಕ್ಷನ್‌ನಲ್ಲಿಎಡಕ್ಕೆ ತಿರುಗಿ ಸೊಂಡೇಕೊಪ್ಪ, ನೆಲಮಂಗಲದ ಮೂಲಕ ಮುಂದೆ ಸಾಗಬಹುದು.
  • ತುಮಕೂರು ಕಡೆಯಿಂದ ಬಂದು ನೈಸ್‌ ರಸ್ತೆಯಲ್ಲಿಸಂಚರಿಸುವ ಸರಕು ಸಾಗಣೆ ವಾಹನಗಳು ನೆಲಮಂಗಲ, ಸೊಂಡೇಕೊಪ್ಪ ಬೈಪಾಸ್‌ನಲ್ಲಿಬಲ ತಿರುವು ಪಡೆದು ಸೊಂಡೇಕೊಪ್ಪ, ತಾವರೆಕೆರೆ, ಹೆಮ್ಮಿಗೆಪುರ, ಕೊಮ್ಮಘಟ್ಟ, ಕೆಂಗೇರಿ ಮೂಲಕ ಮೈಸೂರು ರಸ್ತೆಗೆ ಹೋಗಬಹುದು.
  • ನಗರದ ಒಳ ಭಾಗದಿಂದ ಮಾಗಡಿ ಕಡೆಗೆ ಸಂಚರಿಸುವ ವಾಹನಗಳು ಎಂ.ಸಿ.ಸರ್ಕಲ್‌ನಲ್ಲಿಎಡಕ್ಕೆ ತಿರುಗಿ ಮೈಸೂರು ರಸ್ತೆ, ಕೆಂಗೇರಿ, ಕೊಮ್ಮಘಟ್ಟ, ಹೆಮ್ಮಿಗೆಪುರ, ತಾವರೆಕೆರೆ ಮೂಲಕ ಹೋಗಬಹುದು.
  • ನಾಯಂಡಹಳ್ಳಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಬರುವ ವಾಹನಗಳು ನಾಯಂಡಹಳ್ಳಿ ಜಂಕ್ಷನ್‌ನಲ್ಲಿಮೈಸೂರು ರಸ್ತೆಗೆ ಹೋಗಿ ಕೆಂಗೇರಿ, ಆರ್‌.ಆರ್‌.ಕಾಲೇಜು, ರಾಮೋಹಳ್ಳಿ, ಚಂದ್ರಪ್ಪ ಸರ್ಕಲ್‌, ತಾವರೆಕೆರೆ ಮೂಲಕ ಮಾಗಡಿ ರಸ್ತೆ ಮತ್ತು ತುಮಕೂರು ರಸ್ತೆಗೆ ಸಂಚರಿಸಬಹುದು.
  • ಸಿಎಂಟಿಐ ಜಂಕ್ಷನ್‌ನಿಂದ ನಾಯಂಡಹಳ್ಳಿ, ಮೈಸೂರು ರಸ್ತೆ ಕಡೆಗೆ ಹೋಗುವ ವಾಹನಗಳು ಗೊರಗುಂಟೆಪಾಳ್ಯ, ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆ, ಎಂ.ಸಿ.ಸರ್ಕಲ್‌, ವಿಜಯನಗರ ಮೂಲಕ ಮೈಸೂರು ರಸ್ತೆಗೆ ಸಂಚರಿಸಬಹುದು.
  • ಹಳೆ ವರ್ತುಲ ರಸ್ತೆಯಲ್ಲಿಕೆಂಗೇರಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಬರುವ ವಾಹನಗಳು ಉಲ್ಲಾಳ ಜಂಕ್ಷನ್‌ನಲ್ಲಿಎಡ ತಿರುವು ಪಡೆದು ಉಲ್ಲಾಳ ವಿಲೇಜ್‌, ರಾಮಸಂದ್ರ ಬ್ರಿಡ್ಜ್‌, ಹೆಮ್ಮಿಗೆಪುರ, ತಾವರೆಕೆರೆ ಮೂಲಕ ತುಮಕೂರು ರಸ್ತೆಗೆ ಸಂಚರಿಸಬಹುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com