ಬೆಂಗಳೂರು: ಒಂದು ತಿಂಗಳಿನಲ್ಲಿ 1,785 ಕೆಜಿ ಡ್ರಗ್ಸ್ ವಶಕ್ಕೆ, 487 ಬಂಧನ

ಡ್ರಗ್ಸ್ ವಿರುದ್ಧ ಬೆಂಗಳೂರು ಪೊಲೀಸರು ಸಮರ ಸಾರಿದ್ದು. ಜುಲೈ ಒಂದೇ ತಿಂಗಳಿನಲ್ಲಿ ಬರೋಬ್ಬರಿ 18 ಕೋಟಿ ಮೌಲ್ಯದ 1785 ಕೆ.ಜಿ. ತೂಕದ ವಿವಿಧ ಮಾದರಿಯ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಸೋಮವಾರ ಬೆಂಗಳೂರಿನಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ಪರಿಶೀಲನೆ ನಡೆಸಿದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಸೋಮವಾರ ಬೆಂಗಳೂರಿನಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ಪರಿಶೀಲನೆ ನಡೆಸಿದರು.

ಬೆಂಗಳೂರು: ಡ್ರಗ್ಸ್ ವಿರುದ್ಧ ಬೆಂಗಳೂರು ಪೊಲೀಸರು ಸಮರ ಸಾರಿದ್ದು. ಜುಲೈ ಒಂದೇ ತಿಂಗಳಿನಲ್ಲಿ ಬರೋಬ್ಬರಿ 18 ಕೋಟಿ ಮೌಲ್ಯದ 1785 ಕೆ.ಜಿ. ತೂಕದ ವಿವಿಧ ಮಾದರಿಯ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ‘ಡ್ರಗ್ಸ್‌ಗೆ ಸಂಬಂಧಪಟ್ಟಂತೆ ನಗರದ 8 ವಿಭಾಗಗಳ ವ್ಯಾಪ್ತಿಯ ಠಾಣೆಗಳಲ್ಲಿ 378 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 487 ಆರೋಪಿಗಳನ್ನು ಬಂಧಿಸಲಾಗಿದ್ದು, ಇದರಲ್ಲಿ 13 ವಿದೇಶಿಯರಿದ್ದಾರೆ’ ಎಂದು ಹೇಳಿದರು.

ಮಾದಕ ವಸ್ತು ಸೇವನೆ ಹಾಗೂ ಮಾರಾಟ ಮಾಡುವವರ ವಿರುದ್ಧ ತಿಂಗಳಲ್ಲಿ 378 ಕೇಸ್ ಹಾಕಲಾಗಿದ್ದು, 474 ಭಾರತೀಯರು ಹಾಗೂ 13 ವಿದೇಶಿ ಪ್ರಜೆಗಳನ್ನ ಬಂಧಿಸಲಾಗಿದೆ.

72 ಪ್ರಕರಣಗಳಲ್ಲಿ ಡ್ರಗ್ಸ್ ಪೆಡ್ಲರ್ ಗಳ‌ ಮೇಲೆ 306 ಪ್ರಕರಣಗಳಲ್ಲಿ ಡ್ರಗ್ಸ್ ಸೇವನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಅಕ್ರಮವಾಗಿ ನೆಲೆಸಿದ್ದ 11 ಜನ ವಿದೇಶಿಯರನ್ನ ಗಡಿಪಾರು ಮಾಡಲಾಗಿದೆ‌. ವಶಪಡಿಸಿಕೊಂಡ ಡ್ರಗ್ ನಲ್ಲಿ 1,723 ಕೆ.ಜಿ. ಅಫೀಮು, 55,895 ಕೆ.ಜಿ. ಹೆರಾಯಿನ್, 40 ಗ್ರಾಂ ಹಾಶಿಶ್ ಆಯಿಲ್, 1.026 ಕೆ.ಜಿ. ಚರಸ್, 467 ಗ್ರಾಂ,  ಸೇರಿದಂತೆ 572 ವಿವಿಧ ರೀತಿಯ  ಮಾತ್ರೆಗಳು 43 ಎಲ್ ಎಸ್ ಡಿ ಸ್ಟಿಪ್ಸ್ ಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ.

ಮಾದಕ ವಸ್ತು ಸೇವನೆ ಬಗ್ಗೆ ಅರಿವು ಮೂಡಿಸಲು ಶೈಕ್ಷಣಿಕ ಕಾಲೇಜುಗಳಿಗೆ ಹೋಗಿ ಪೊಲೀಸರು ತಿಳುವಳಿಕೆ ಮೂಡಿಸುತ್ತಿದ್ದಾರೆ. ನಿರಂತರ ಕಾರ್ಯಾಚರಣೆ ನಡೆಸಿ 21 ಪ್ರಕರಣಗಳನ್ನ‌ ಮತ್ತು ಸೇವನೆ ಮಾಡುತ್ತಿದ್ದವರ ವಿರುದ್ಧ 32  ಪ್ರಕರಣ ದಾಖಲಿಸಿದ್ದಾರೆ.

ತಂಬಾಕು ಪದಾರ್ಥಗಳನ್ನ ಮಾರಾಟ ಮಾಡುತ್ತಿದ್ದವರ ವಿರುದ್ಧ 24 ಕೇಸ್ ದಾಖಲಿಸಿಕೊಳ್ಳಲಾಗಿದೆ. ಇನ್ನೂ 3588 ಲಘು ಪ್ರಕರಣ ದಾಖಲಿಸಿ 5,99,350 ರೂ ದಂಡ ವಿಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com