
ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಪತಿ ಹಾಗೂ ಪತ್ನಿ ಜೊತೆಗೆ ನಡೆದ ಜಗಳವೊಂದು ಕೊಲೆಯಲ್ಲಿ ಅಂತ್ಯವಾದ ಘಟನೆ ನಗರದ ಹೊರವಲಯದ ಸರ್ಜಾಪುರದಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಬಿಕ್ಕನಹಳ್ಳಿಯ ಜನತಾ ಕಾಲೋನಿ ನಿವಾಸಿ ಲಕ್ಷ್ಮಮ್ಮ (47) ಹತ್ಯೆಯಾದ ಮಹಿಳೆಯಾಗಿದ್ದಾರೆ. ಆರೋಪಿಯನ್ನು ವೆಂಕಟಸ್ವಾಮಿ (53) ಎಂದು ಗುರ್ತಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರು: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ, ಯುವಕ ಸಾವು
ಆರೋಪಿ ವೆಂಕಟಸ್ವಾಮಿ ಹಾಗೂ ಪತ್ನಿ ಲಕ್ಷ್ಮಮ್ಮ ದಿನಗೂಲಿ ಕಾರ್ಮಿಕರಾಗಿದ್ದರು. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಇಬ್ಬರಿಗೂ ಮದುವೆಯಾಗಿದೆ.
ಮಂಗಳವಾರ ತಡರಾತ್ರಿ ದಂಪತಿಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿದ್ದು, ಈ ವೇಳೆ ಕೆಂಡಾಮಂಡಲಗೊಂಡಿರುವ ಪತಿ, ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ನಂತರ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಸಂಬಂಧ ಸರ್ಜಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ತನಿಖೆ ಕೈಗೊಂಡಿದ್ದಾರೆ.
Advertisement