ದಕ್ಷಿಣ ಕನ್ನಡದಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಧರ್ಮಸ್ಥಳ ಸಮೀಪ ಮುಸ್ಲಿಂ ಯುವಕನ ಮೇಲೆ ಹಲ್ಲೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದ್ದು, ಬುಧವಾರದಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಬಾಲಕಿಯೊಬ್ಬಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾವನ್ನು ಅಡ್ಡಗಟ್ಟಿ, ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Published: 03rd August 2023 04:05 PM | Last Updated: 03rd August 2023 07:15 PM | A+A A-

ಸಾಂದರ್ಭಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದ್ದು, ಬುಧವಾರದಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಬಾಲಕಿಯೊಬ್ಬಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾವನ್ನು ಅಡ್ಡಗಟ್ಟಿ, ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸಂಘ ಪರಿವಾರದ ಕಾರ್ಯಕರ್ತರು ಆಗಸ್ಟ್ 2ರ ರಾತ್ರಿ 9 ಗಂಟೆ ಸುಮಾರಿಗೆ ವಾಹನವನ್ನು ಅಡ್ಡಗಟ್ಟಿದ್ದಾರೆ ಮತ್ತು ಆಟೋ ಚಾಲಕ ಮೊಹಮ್ಮದ್ ಆಶಿಕ್ (22) ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದದ್ದು ಹಿಂದೂ ಹುಡುಗಿ ಎಂಬ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.
ಆಶಿಕ್ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿಯಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ: ಕಾರ್ಕಳ: ನೈತಿಕ ಪೊಲೀಸ್ ಗಿರಿ ಪ್ರಕರಣ 5 ಮಂದಿ ಬಂಧನ
ಆಗಸ್ಟ್ 1ರಂದು ಮಂಗಳೂರಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಪೊಲೀಸ್‌ಗಿರಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು.