ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿದೆ.

ಬೆಂಗಳೂರು: ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿದೆ.

ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಮತ್ತು ಎಂಎಲ್‌ಸಿ ಚಲುವಾದಿ ನಾರಾಯಣಸ್ವಾಮಿ ಅವರು ಸಿದ್ದರಾಮಯ್ಯ ದಲಿತ ವಿರೋಧಿ ಎಂದು ಕರೆದಿದ್ದಾರೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸರ್ಕಾರವು ಎಸ್‌ಸಿಎಸ್‌ಪಿ/ಟಿಎಸ್‌ಪಿ ನಿಧಿಯಿಂದ 11,000 ಕೋಟಿ ರೂ.ಗಳನ್ನು ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವನ್ನು ಸರ್ಕಾರ ಶಿಕ್ಷಣ ಮತ್ತು ಆರೋಗ್ಯ ಸೇವೆಗೆ ಬಳಸಬೇಕೇ ಹೊರತು ಉಚಿತ ಬಸ್ ಸೇವೆ ಅಥವಾ ವಿದ್ಯುತ್‌ಗೆ ಬಳಸಬಾರದು ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಸರ್ಕಾರ ನಾವು ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಲ್ಲ, ಬಿಜೆಪಿ ಆರೋಪ ನಿರಾಧಾರ. ಅನುದಾನವನ್ನು ಸಮುದಾಯಗಳ ಜನರ ಕಲ್ಯಾಣಕ್ಕಾಗಿ ಬಳಸಲಾಗುತ್ತಿದೆ ಎಂದು ಹೇಳಿದೆ.

Related Stories

No stories found.

Advertisement

X
Kannada Prabha
www.kannadaprabha.com