ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆ 225ಕ್ಕೆ ಇಳಿಸಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಚುನಾವಣೆ ನಡೆಸಲು ಸಜ್ಜಾಗಿದ್ದು, ವಾರ್ಡ್ ಗಳ ಸಂಖ್ಯೆಯನ್ನು 225ಕ್ಕೆ ಇಳಿಸಿ ಶುಕ್ರವಾರ ಆದೇಶ ಹೊರಡಿಸಿದೆ.
ಬಿಬಿಎಂಪಿ ಕಚೇರಿ
ಬಿಬಿಎಂಪಿ ಕಚೇರಿ

ಬೆಂಗಳೂರು: ರಾಜ್ಯ ಸರ್ಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಚುನಾವಣೆ ನಡೆಸಲು ಸಜ್ಜಾಗಿದ್ದು, ವಾರ್ಡ್ ಗಳ ಸಂಖ್ಯೆಯನ್ನು 225ಕ್ಕೆ ಇಳಿಸಿ ಶುಕ್ರವಾರ ಆದೇಶ ಹೊರಡಿಸಿದೆ.

ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸಿ ಈ ಹಿಂದೆ ಬಿಜೆಪಿ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ತಕ್ಷಣದಿಂದ ಹಿಂಪಡೆಯಲಾಗಿದೆ ಎಂದು ರಾಜ್ಯ ಸರ್ಕಾರ ಹೊರಡಿಸಿದ ರಾಜ್ಯಪತ್ರದಲ್ಲಿ ತಿಳಿಸಲಾಗಿದೆ.

ಬಿಬಿಎಂಪಿ ಈ ಹಿಂದೆ 198 ವಾರ್ಡುಗಳನ್ನು ಹೊಂದಿತ್ತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಾರ್ಡುಗಳನ್ನು ಪುನರ್ ವಿಂಗಡಣೆ ಮಾಡಿ ವಾರ್ಡ್ ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸಿತ್ತು. ಆದರೆ, ಇದೀಗ ಕಾಂಗ್ರೆಸ್ ಸರ್ಕಾರ ವಾರ್ಡ್ ಗಳ ಸಂಖ್ಯೆಯನ್ನು 225ಕ್ಕೆ ನಿಗದಿಗೊಳಿಸಿ ಆದೇಶ ಹೊರಡಿಸಿದೆ.

ಕಾಂಗ್ರೆಸ್ ಸರ್ಕಾರ, ಬಿಜೆಪಿ ಸರ್ಕಾರದ ಅಧಿಸೂಚನೆ ಹಿಂಪಡೆಯುವ ಮೂಲಕ ಬಿಬಿಎಂಪಿ ಚುನಾವಣೆ ನಡೆಸಲು ಸಿದ್ಧವಾಗಿದೆ. ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ. ಆದರೆ ಕೋರ್ಟ್ ಆದೇಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಬಿಜೆಪಿ ಸರ್ಕಾರ ಮಾಡಿದ ವಾರ್ಡ್ ವಿಂಗಡನೆಗೆ ಸಂಬಂಧಿಸಿದಂತೆ ಅನೇಕ ದೂರುಗಳು ಬಂದ ಹಿನ್ನಲೆಯಲ್ಲಿ ಹಳೆ ವಾರ್ಡ್ ವಿಂಗಡನೆ ರದ್ದು ಮಾಡಿ ಮತ್ತೆ ಹೊಸದಾಗಿ ವಾರ್ಡ್‌ಗಳನ್ನು ವಿಂಗಡನೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಅಲ್ಲದೆ 12 ವಾರಗಳ ಒಳಗಾಗಿ ವಾರ್ಡ್ ವಿಂಗಡನೆ ಮಾಡುವಂತೆ ಆದೇಶ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com