ಒಣಹವೆ ಎದುರಿಸಲು ನೂತನ ಕೃಷಿ ಪದ್ಧತಿ ಅಗತ್ಯ: ಸಚಿವ ಚೆಲುವರಾಯಸ್ವಾಮಿ

ರಾಜ್ಯದಲ್ಲಿ ಒಣಹವೆ ಎದುರಿಸಲು ಸುಧಾರಿತ ಬೇಸಾಯ ಪದ್ಧತಿಯನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಗುರುವಾರ ಹೇಳಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಒಣಹವೆ ಎದುರಿಸಲು ಸುಧಾರಿತ ಬೇಸಾಯ ಪದ್ಧತಿಯನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಗುರುವಾರ ಹೇಳಿದರು.

ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯದ (ಯುಎಎಸ್) 57ನೇ ಘಟಿಕೋತ್ಸವದಲ್ಲಿ ಮಾತನಾಡಿದ ಚೆಲುವರಾಯಸ್ವಾಮಿ ಅವರು, ಹವಾಮಾನ ಬದಲಾವಣೆಯ ಪರಿಣಾಮ ರಾಜ್ಯದಲ್ಲಿ ಮಳೆ ಕಡಿಮೆಯಾಗಿದೆ ಮತ್ತು ಒಣಹವೆಯ ದಿನಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ. ಹವಾಮಾನ ಬದಲಾವಣೆಯು ಮಳೆಯ ಪ್ರಮಾಣ ಮತ್ತು ಬಿತ್ತನೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಆ ಮೂಲಕ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳ ಮೇಲೆ ಅಗಾಧ ಪರಿಣಾಮ ಬೀರುತ್ತದೆ. ಮಳೆಯ ದಿನಗಳ ಸಂಖ್ಯೆ ಕಡಿಮೆಯಾಗುವ ನಿರೀಕ್ಷೆಯಿದ್ದು,  ಅಂತಹ ಸಂದರ್ಭಗಳಲ್ಲಿ ಸುಸ್ಥಿರ ಕೃಷಿ ಉತ್ಪಾದನೆಗಾಗಿ ಸುಧಾರಿತ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.

ನಿರುದ್ಯೋಗಿ ಯುವಕರಿಗೆ ಬೀಜ ಉತ್ಪಾದನಾ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ನಡೆಸುವಂತೆ ಇದೇ ವೇಳೆ ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯಕ್ಕೆ ಕರೆ ನೀಡಿದರು.

ಶುಕ್ರವಾರ ಒಟ್ಟು 1,295 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗಿದ್ದು, ಅದರಲ್ಲಿ 891 ಪದವಿ, 299 ಸ್ನಾತಕೋತ್ತರ ಪದವಿ ಮತ್ತು 105 ಡಾಕ್ಟರೇಟ್ ಪದವಿಗಳನ್ನು ನೀಡಲಾಗಿದೆ.

ಇವುಗಳಲ್ಲಿ 54 ಯುಎಎಸ್ ಚಿನ್ನದ ಪದಕಗಳನ್ನು ಪಡೆದ 66 ವಿದ್ಯಾರ್ಥಿಗಳು ಸೇರಿದಂತೆ ಶೈಕ್ಷಣಿಕ ಕ್ಷೇತ್ರದಲ್ಲಿ ಶ್ರೇಷ್ಠತೆಗಾಗಿ ಒಟ್ಟು 160 ಚಿನ್ನದ ಪದಕಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com