ಎನ್ಎಫ್ ಹೆಚ್ ಎಸ್ ನಲ್ಲಿ ಅಂಗವೈಕಲ್ಯದ ಬಗ್ಗೆ ಪ್ರಶ್ನೆಗಳಿಲ್ಲದೇ ಇರುವುದಕ್ಕೆ ಕೇಂದ್ರ ಸಚಿವಾಲಯಕ್ಕೆ ಹೈಕೋರ್ಟ್ ನೊಟೀಸ್

ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆಯಲ್ಲಿ ಅಂಗವೈಕಲ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳೇ ಇಲ್ಲದಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ನೊಟೀಸ್ ಜಾರಿಗೊಳಿಸಿದೆ.
ಅಂಗವೈಕಲ್ಯ ( ಸಾಂಕೇತಿಕ ಚಿತ್ರ)
ಅಂಗವೈಕಲ್ಯ ( ಸಾಂಕೇತಿಕ ಚಿತ್ರ)

ಬೆಂಗಳೂರು: ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆಯಲ್ಲಿ ಅಂಗವೈಕಲ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳೇ ಇಲ್ಲದಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ನೊಟೀಸ್ ಜಾರಿಗೊಳಿಸಿದೆ.

ಸಮೀಕ್ಷೆಯಲ್ಲಿ ನಿರ್ದಿಷ್ಟ ಪ್ರಶ್ನೆಗಳನ್ನು ಕೈಬಿಟ್ಟಿದ್ದಕ್ಕಾಗಿ ಜಾವೇದ್ ಅಬಿದಿ ಫೌಂಡೇಷನ್ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿತ್ತು.

ಫೌಂಡೇಷನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸಿಜೆ ಪ್ರಸನ್ನ ಬಿ ವರಾಳೆ ಹಾಗೂ ನ್ಯಾ. ಎಂಜಿಎಸ್ ಕಮಲ್ ಅವರಿದ್ದ ಪೀಠ ನೊಟೀಸ್ ಜಾರಿಗೆ ಆದೇಶ ನೀಡಿದೆ. 

ವಿಕಲಾಂಗ ವ್ಯಕ್ತಿಗಳ ಹಕ್ಕುಗಳ ಕಾಯಿದೆಯಲ್ಲಿ ಉಲ್ಲೇಖವಾಗಿರುವ 21 ರೀತಿಯ ವೈಖಲ್ಯತೆಯನ್ನು ಪ್ರಶ್ನೆಗಳಲ್ಲಿ ಸೇರಿಸಲು ಸಚಿವಾಲಯಕ್ಕೆ ನಿರ್ದೇಶನ ನೀಡಬೇಕೆಂದು ಪಿಐಎಲ್ ಮೂಲಕ ಮನವಿ ಮಾಡಲಾಗಿತ್ತು. 

ಅಂಗವೈಖಲ್ಯಕ್ಕೆ ಸಂಬಂಧಪಟ್ಟಂತೆ ಪ್ರಶ್ನೆಗಳನ್ನು ಕೈಬಿಟ್ಟಿರುವುದರ ಪರಿಣಾಮ ಅಂಗವೈಕಲ್ಯಕ್ಕೆ ಸಂಬಂಧಿಸಿದಂತೆ ಸರಿಯಾದ ಡೇಟಾವನ್ನು ಸಂಗ್ರಹಿಸಲು ಸಾಧ್ಯವಾಗುವುದಿಲ್ಲ. ಇದರಿಂದ ವಿಕಲಾಂಗ ವ್ಯಕ್ತಿಗಳ ಹಕ್ಕುಗಳ ಸಮಿತಿ ಮತ್ತು ಹೊಸ ಅಂಗವೈಕಲ್ಯ ನೀತಿ ಮೇಲೆ ಪರಿಣಾಮ ಉಂಟಾಗುತ್ತದೆ ಎಂದು ಅರ್ಜಿದಾರರು ವಾದಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com