ಬಿಜೆಪಿ ಅವಧಿಯಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ ಮಾಹಿತಿ ಕೊಡಿ: ಬಿಬಿಎಂಪಿಗೆ ಡಿಕೆಶಿ ಸೂಚನೆ

ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್‌ ಅವರು,  ಬಿಬಿಎಂಪಿ  ಮೇಲಿನ ಹಿಡಿತವನ್ನು ಮತ್ತಷ್ಟು ಬಿಗಿಗೊಳಿಸಲು ಮುಂದಾಗಿದ್ದು, ಬಿಜೆಪಿ ಅವಧಿಯಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ ಮಾಹಿತಿ ಕೊಡುವಂತೆ ಬಿಬಿಎಂಪಿಗೆ ಸೂಚನೆ ನೀಡಿದ್ದಾರೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್‌ ಅವರು,  ಬಿಬಿಎಂಪಿ  ಮೇಲಿನ ಹಿಡಿತವನ್ನು ಮತ್ತಷ್ಟು ಬಿಗಿಗೊಳಿಸಲು ಮುಂದಾಗಿದ್ದು, ಬಿಜೆಪಿ ಅವಧಿಯಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ ಮಾಹಿತಿ ಕೊಡುವಂತೆ ಬಿಬಿಎಂಪಿಗೆ ಸೂಚನೆ ನೀಡಿದ್ದಾರೆ.

ಪ್ರತಿ ಕಾಮಗಾರಿಯ ಬಗ್ಗೆ 15 ಅಂಶಗಳನ್ನು ಒಳಗೊಂಡ ಪ್ರಶ್ನೆಗೆ ಉತ್ತರ ಸಹಿತ ಮಾಹಿತಿ ಕೊಡುವಂತೆ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದ್ದಾರೆಂದು ತಿಳಿದುಬಂದಿದೆ.

ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಬೆಂಗಳೂರು ಉಸ್ತುವಾರಿ ಸಚಿವರಾಗಿದ್ದ 2019 ರಿಂದ 2023ರ ಅವಧಿಯಲ್ಲಿ ನಡೆದಿರುವ ಕಾಮಗಾರಿಗಳ ಮಾಹಿತಿ ನೀಡುವಂತೆ ಪತ್ರದಲ್ಲಿ ಸೂಚನೆ ನೀಡಿದ್ದಾರೆ.

2019 ರಿಂದ 2023 ರವರೆಗೆ ಬಿಬಿಎಂಪಿಯಲ್ಲಿ ನಡೆದ ಟೆಂಡರ್‌ಗಳು, ಕಾಮಗಾರಿಗಳು, ಕಾಮಗಾರಿಗೆ ಬಿಡುಗಡೆಯಾದ ಅನುದಾನದ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com