ರಾಜ್ಯಪಾಲರಿಗೆ ನಕಲಿ ಪತ್ರ ಸಲ್ಲಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಡಿಜಿಪಿ ಮನವಿ

ಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಸರ್ಕಾರದ ತೇಜೋವಧೆಯಾಗುವಂತೆ ಸುಳ್ಳು ಆರೋಪ ಮಾಡಿ ನಕಲಿ ಸಹಿಯೊಂದಿಗೆ ರಾಜ್ಯಪಾಲರಿಗೆ ದೂರು ನೀಡಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ  ಅಲೋಕ್ ಮೋಹನ್ ಅವರು ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ.
ಚಲುವರಾಯಸ್ವಾಮಿ, ಡಿಜಿಪಿ
ಚಲುವರಾಯಸ್ವಾಮಿ, ಡಿಜಿಪಿ

ಬೆಂಗಳೂರು: ಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಸರ್ಕಾರದ ತೇಜೋವಧೆಯಾಗುವಂತೆ ಸುಳ್ಳು ಆರೋಪ ಮಾಡಿ ನಕಲಿ ಸಹಿಯೊಂದಿಗೆ ರಾಜ್ಯಪಾಲರಿಗೆ ದೂರು ನೀಡಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್ ಅವರು ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ.

ಈ ಸಂಬಂಧ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿರುವ ಡಿಜಿಪಿ, ಚಲುವರಾಯಸ್ವಾಮಿ ಅತ್ಯಂತ ಸಮರ್ಥವಾಗಿ ಕೃಷಿ ಇಲಾಖೆ ನಿರ್ವಹಣೆ ಮಾಡುತ್ತಿದ್ದಾರೆ. ಆದರೆ ಅವರ ಜನಪ್ರಿಯತೆ, ಏಳಿಗೆಯನ್ನು ಸಹಿಸದ ಕೆಲವು ಪಟ್ಟ ಭದ್ರ ಹಿತಾಸಕ್ತಿಗಳು ಅವರ ವಿರುದ್ಧ ಪಿತೂರಿ ಕೆಲಸವನ್ನು ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳ ಹೆಸರಿನಲ್ಲಿ  ಇಲ್ಲಸಲ್ಲದ ಆರೋಪಗಳನ್ನು ಸೃಷ್ಟಿಸಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಇದನ್ನು ಉದ್ದೇಶಪೂರ್ವಕವಾಗಿ ಮಾನಹಾನಿ ಮಾಡಲೆಂದೆ ಮಾಡಿರುವುದಾಗಿ ಗೊತ್ತಾಗಿದೆ ಎಂದಿದ್ದಾರೆ. 

ಯಾವೊಬ್ಬ ಕೃಷಿ ಅಧಿಕಾರಿಯು ಸಹ ಅವರ ವಿರುದ್ಧ ಈ ರೀತಿಯ ಪತ್ರ ಬರೆದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಸಹಿ ಸಹ ತಾವು ಮಾಡಿದ್ದಲ್ಲ ಎಂಬುದನ್ನು ಸ್ಪಷ್ಟಪಡಿಸಿರುತ್ತಾರೆ. ಇಲ್ಲಿ ಸಚಿವರ  ಮೇಲೆ ವೃಥಾ ಲಂಚದ ಆರೋಪ ಮಾಡಿ ಆ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಪತ್ರವನ್ನು ಸೃಷ್ಟಿಸಿ ಅವರ ನಕಲಿ ಸಹಿಯನ್ನು ಮಾಡಿ ರಾಜ್ಯಪಾಲರಿಗೆ ದೂರು ಕೊಟ್ಟಿರುತ್ತಾರೆ. ಇದು ಅಕ್ಷಮ್ಯ ಅಪರಾಧವಾಗಿದೆ. ಅಲ್ಲವೇ ಇವರ ವಿರುದ್ಧ ಇಂತಹ ಹತ್ತಾರು ಷಡ್ಯಂತ್ರಗಳು ನಡೆಯುತ್ತಿರುವುದು ಸಹ ನಮ್ಮ ಗಮನಕ್ಕೆ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಪತ್ರವನ್ನು ರಾಜ್ಯಪಾಲರಿಗೆ ಮಾತ್ರವಲ್ಲದೆ ಇನ್ನಿತರ  ಸಾಂವಿಧಾನಿಕ ಸಂಸ್ಥೆಗಳಿಗೆ ಸಲ್ಲಿಸಿದ್ದಾರೆ ಎಂಬುದು ತಿಳಿದು ಬಂದಿದೆ. ಈ ಮೂಲಕ ಸಚಿವ ಚಲುವರಾಯಸ್ವಾಮಿ ಅವರ ತೇಜೋವಧೆಗೆ ಯತ್ನಿಸಲಾಗಿದೆ. ಅಲ್ಲದೆ ಕಳಂಕ ತರುವ ಪ್ರಯತ್ನವನ್ನು ಮಾಡಲಾಗಿದೆ. ಮಾಧ್ಯಮಗಳಲ್ಲಿ ಈ ಸುದ್ದಿ ಬಿತ್ತರವಾಗಿ ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೆಟ್ಟ ಅಭಿಪ್ರಾಯ ಮೂಡುವಂತೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯಪಾಲರಿಗೆ ನಕಲಿ ಪತ್ರ ಸಲ್ಲಿಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೋರಿದ್ದು, ಇಂತಹ ನಕಲಿ ಪತ್ರಗಳನ್ನು ಬರೆಯುವ ಮತ್ತು ಅದಕ್ಕೆ ಕುಮ್ಮಕ್ಕು ನೀಡುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಕೋರುತ್ತಿದ್ದೇವೆ. ಮುಂದೆ ಎಂದೂ ಸಹ ಇಂತಹ ಕೆಲಸಗಳಿಗೆ ಯಾರು ಸಹ ಕೈ ಹಾಕಬಾರದು. ಆ ನಿಟ್ಟಿನಲ್ಲಿ ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com